Advertisement

ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲು ಸಿದ್ದರಾಮಯ್ಯ ಬಿಜೆಪಿ ವಕ್ತಾರರೇ?: ಶೆಟ್ಟರ್

01:30 PM Jan 11, 2021 | Team Udayavani |

ಬೀದರ್: ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ವರಿಷ್ಠರೇ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಕುಟುಕ್ಕಿದ್ದಾರೆ.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷ (ಕಾಂಗ್ರೆಸ್) ಪ್ರತಿ ಚುನಾವಣೆಯಲ್ಲಿ ಸೋತು ಸುಣ್ಣವಾಗುತ್ತಿದ್ದು, ಪಕ್ಷಕ್ಕೆ ಗತಿ ಇಲ್ಲದಂತಾಗಿದೆ. ಆ ಬಗ್ಗೆ ವಿಚಾರ ಮಾಡಿ, ನಿಮ್ಮ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಸಂಬಂಧ ಸರಿಪಡಿಸಿಕೊಳ್ಳಿ. ಬೇಕಾಬಿಟ್ಟಿ ಮಾತನಾಡುವುದನ್ನು ಬಿಟ್ಟು ಸರ್ಕಾರಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಯಡಿಯೂರಪ್ಪ ಅವರೇ ಮುಂದಿನ ಎರಡುವರೆ ವರ್ಷ ಸಿಎಂ ಅಗಿ ಮುಂದುವರೆಯಲಿದ್ದಾರೆ ಎಂದು ಹೇಳಿದ ಅವರು, ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಇದೆ. ಎಷ್ಟು ಜನ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಅವರೇ ನಿರ್ಣಯಿಸಲಿದ್ದಾರೆ ಎಂದರು.

ಬೆಳಗಾವಿ ಸಂಸದ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ, ನನಗೆ ಆಸೆಯೂ ಇಲ್ಲ. ಅಷ್ಟಕ್ಕೂ ಇನ್ನೂ ಚುನಾವಣೆ ಘೋಷಣೆಯಾಗಿಲ್ಲ. ಬೆಳಗಾವಿಯಲ್ಲಿ ಅಂಗಡಿ ಕುಟುಂಬ ಅಥವಾ ಯಾರು ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಜತೆಗೆ ಬಸವಕಲ್ಯಾಣ ಮತ್ತು ಮಸ್ಕಿ ಉಪ ಚುನಾವಣೆಯ ಅಭ್ಯರ್ಥಿಗಳನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಜೆಪಿಯದ್ದು 30 ಪರ್ಸೆಂಟ್ ಸರ್ಕಾರ, ಏನಾದರೂ ಅನುಮಾನ ಇದೆಯಾ? ಸಿದ್ದರಾಮಯ್ಯ

Advertisement

ರಾಜ್ಯದಲ್ಲಿ ಶೇ. 60ರಷ್ಟು ಗ್ರಾಮ ಪಂಚಾಯತ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ರಾಜ್ಯಾದ್ಯಂತ ಜನ ಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಜ. 17ರಂದು ಸಮಾವೇಶದ ಸಮಾರೋಪ ನಡೆಯಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಈ ಹಿಂದೆ ನಡೆಸಿದ ಗ್ರಾಮ ಸ್ವರಾಜ್ ಸಮಾವೇಶವೇ ಕಾರಣ. ಬಿಜೆಪಿಯ ಸಮಾವೇಶದಿಂದ ಕಾಂಗ್ರೆಸ್ ಎಚ್ಚರಗೊಂಡು ಸಂಕಲ್ಪ ಯಾತ್ರೆ ನಡೆಸುತ್ತಿದೆ. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ಸಿನ ಈ ಸಮಾವೇಶ ಯಶಸ್ಬಿಯಾಗಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಶಶಿಕಲಾ ಜೊಲ್ಲಾ, ಪ್ರಭು ಚವ್ಹಾಣ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next