Advertisement

ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧರಿಸುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ ಸಿಡಿಮಿಡಿ

10:06 AM Dec 11, 2019 | keerthan |

ಬೆಂಗಳೂರು: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ ಅಂಗೀಕಾರವಾಗಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಈ ಮಸೂದೆಯನ್ನು ವಿರೋಧಿಸಿದ್ದು, ಧರ್ಮದ ಆಧಾರದಲ್ಲಿ ಪೌರತ್ವ ನಿರ್ಧರಿಸುವುದು ಸಂವಿಧಾನ ವಿರೋಧಿ ಎಂದಿದ್ಧಾರೆ.

Advertisement

ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ ‘ಪೌರತ್ವ (ತಿದ್ದುಪಡಿ) ಮಸೂದೆ’ ಸಂವಿಧಾನದ ಮೂಲ‌ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ ಎಂದಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next