Advertisement

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಪ್ರವಾಸ: ಸಂತೃಸ್ಥರ ಜೊತೆ ಮಾತುಕತೆ

03:41 PM Oct 25, 2020 | keerthan |

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಸಿದ್ದರಾಮಯ್ಯ ಇಂದು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು.

ಪ್ರವಾಹದಿಂದ ಬೆಳೆ ಕಳೆದುಕೊಂಡಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ರಾಹಶೇಖರ ಪಾಟೀಲ್, ರಹೀಂಖಾನ್, ವಿಧಾನಸಭೆ ವಿರೋಧ ಪಕ್ಷದ ಸಚೇತಕ ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಶರಣಪ್ಪ ಮಟ್ಟೂರು ಮತ್ತಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next