ಮೈಸೂರು : ಅಯೋಧ್ಯೆಯ ವಿವಾದಾತ್ಮಕ ರಾಮ ಮಂದಿರಕ್ಕೆ ನಾನು ದೇಣಿಗೆಯನ್ನು ನೀಡುವುದಿಲ್ಲ. ಬೇರೆ ಎಲ್ಲಿಯಾದರೂ ರಾಮನ ಮಂದಿರಕ್ಕೆ ಬೇಕಾದರೇ ದೇಣಿಗೆ ನೀಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿ ವಿವಾದ ಸೃಷ್ಟಿಸಿಕೊಂಡಿದ್ದರು.
ಓದಿ : ಸೇನಾ ಶಾಲೆಗಳ ಆರ್ಥಿಕ ಸುಸ್ಥಿರತೆಗಾಗಿ ಸೇನೆ, ಇಂದ್ರಾಣಿ ಬಾಲನ್ ಫೌಂಡೇಶನ್ ಒಪ್ಪಂದ
ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರದ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ವಿವಾದಾತ್ಮಕ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕಾಗಿ ಹಲವು ರಾಜಕೀಯದ ಪ್ರಮುಖ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದರು.
ಈಗ, ತಾವು ಹೇಳಿದಂತೆ ನಡೆದುಕೊಳ್ಳುತ್ತಿದ್ದೇನೆ ಎಂಬುವುದನ್ನು ತೋರಿಸಿಕೊಡುವಂತೆ, “ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದೆ. ಕಾರ್ಯಕ್ರಮದಲ್ಲಿ ಭಗೀರಥ ಮಹಾ ಸಂಸ್ಥಾನ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕರಾದ ರವಿಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಓದಿ : ಶೋಪಿಯಾನ್: ಭದ್ರತಾ ಪಡೆ ಎನ್ ಕೌಂಟರ್ ಗೆ ಮೂವರು ಉಗ್ರರ ಸಾವು