ಬೆಂಗಳೂರು : ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದ ಸಂದರ್ಭಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಸಂಘ ಪರಿವಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಓದಿ : ಐಕ್ಯತೆಯಿಂದ ಕೆಲಸ ಮಾಡಬೇಕಿದೆ: ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ.ದೇವೇಗೌಡ
“ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ
@BJP4Karnataka ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ?”
“ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ
@BJP4Karnataka ?”
“ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು. ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಓದಿ : ಅಶ್ಲೀಲ ದೃಶ್ಯಗಳನ್ನು ನೋಡುವವರ ಮೇಲೆ ಕಣ್ಣಿಡಲಿದೆ 1090 : ಉ.ಪ್ರ ಪೊಲೀಸರ ಹೊಸ ಕ್ರಮ..!