Advertisement

ಬಿಜೆಪಿಯ ಸಚಿವರು ಹೈಕಮಾಂಡ್ ಪ್ರತಿನಿಧಿಯ ಮುಂದೆ ಅಹವಾಲು ನೀಡಲು ಕ್ಯೂನಲ್ಲಿದ್ದಾರೆ : ಸಿದ್ದು

07:59 PM Jun 16, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ುಸ್ತುವಾರಿ ಅರುಣ್ ಸಿಂಗ್ ಇಂದು(ಬುಧವಾರ, ಜೂನ್ 16) ಬೆಂಗಳೂರಿಗೆ ಆಗಮಿಸಿದ ಬೆನ್ನಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಿಜೆಪಿ ಸಚಿವರುಗಳನ್ನು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವಿಟ್ ಮಾಡುವ ಮೂಲಕ ಬಿಜೆಪಿಯನ್ನು ವ್ಯಂಗ್ಯ ಮಾಡಿದ ಸಿದ್ದರಾಮಯ್ಯ, ಕಚೇರಿಯಲ್ಲಿ ಕೂತು ಕೆಲಸ ಮಾಡಬೇಕಾಗಿದ್ದ ಸಚಿವರು ಮತ್ತು ಕ್ಷೇತ್ರದಲ್ಲಿ ಜನರ ಜೊತೆ ಇರಬೇಕಾದ ಬಿಜೆಪಿ ಶಾಸಕರು ದೆಹಲಿಯಿಂದ ಬಂದಿರುವ ಬಿಜೆಪಿ ಹೈಕಮಾಂಡ್ ನ ಪ್ರತಿನಿಧಿ ಮುಂದೆ ಅಹವಾಲು ಸಲ್ಲಿಸಲು ಕ್ಯೂನಲ್ಲಿದ್ದಾರೆ ಎಂದಿದ್ದಾರೆ.

ರಾಜ್ಯ ಬಿಜೆಪಿಯ ಪರ ವಿರೋಧ ಬಣಗಳ ಕಿತ್ತಾಟದಲ್ಲಿ ಜನರ ನೋವನ್ನು ಕೇಳುವವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ಯಡಿಯೂರಪ್ಪ ಅವರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ..? : ಸಿದ್ಧರಾಮಯ್ಯ ಪ್ರಶ್ನೆ

ಬಿಜೆಪಿ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ : ಅರುಣ್ ಸಿಂಗ್‌

Advertisement

ಇನ್ನು, ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌,  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಹೇಳಿದ್ದಾರೆ.

ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಿಂಗ್, ಸಚಿವರು, ಶಾಸಕರ ನಡುವೆ ಯಾವುದೇ ಭಿನ್ನಮತವಿಲ್ಲ. ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್‌ ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ 1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪ್ರಫುಲ್ ಪಟೇಲ್ ಭ್ರಷ್ಟಾಚಾರದ ಆರೋಪ : ಪ್ರಧಾನ ಮಂತ್ರಿಯವರಿಗೆ ದೂರು.!

Advertisement

Udayavani is now on Telegram. Click here to join our channel and stay updated with the latest news.

Next