Advertisement

Karnataka CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ

09:41 AM May 18, 2023 | Team Udayavani |

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ  ಮೂಲಗಳು ತಿಳಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಲಭಿಸಿದೆ.

Advertisement

ಮೃ.18ರ ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

ಈ ಬಗ್ಗೆ ಮೇ.17ರ ಬುಧವಾರ ಮದ್ಯರಾತ್ರಿ ನಡೆದ ಅಂತಿಮ ಸಬೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ರ ಶನಿವಾರ ಮಧ್ಯಾಹ್ನ 12.30ಕ್ಕೆ  ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.