Advertisement

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ, ಯಡಿಯೂರಪ್ಪನವರ ದುರಾಡಳಿತ ಕಾರಣ : ಸಿದ್ದರಾಮಯ್ಯ

11:17 AM Feb 23, 2021 | Team Udayavani |

ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.

ಓದಿ : ಶ್ರೀಲಂಕಾ ಪ್ರವಾಸಕ್ಕಾಗಿ ಭಾರತೀಯ ವಾಯುನೆಲೆಯನ್ನು ಬಳಸಲು ಇಮ್ರಾನ್ ಗೆ ಅನುಮತಿಸಿದ ಭಾರತ..!

ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.

Advertisement

ಇನ್ನು,  “ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

 

ಓದಿ : ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Advertisement

Udayavani is now on Telegram. Click here to join our channel and stay updated with the latest news.

Next