Advertisement

ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

12:39 AM Jan 29, 2021 | Team Udayavani |

ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ.
ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Advertisement

ಉಭಯ ಸದನಗಳ ಕಲಾಪದ ಎಲ್ಲ ದಿನಗಳಲ್ಲೂ ಸದಸ್ಯರು ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಈ ಮಧ್ಯೆ ಶುಕ್ರವಾರ ಮತ್ತೂಮ್ಮೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ವಿಧಾನಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಅವರನ್ನು ಕಣಕ್ಕೆ ಇಳಿಸಲು ಇದೇ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೆಡಿಎಸ್‌, ಬಿಜೆಪಿ ಮೈತ್ರಿ ಸದನದ ಕಲಾಪ ದಲ್ಲಿ ದಾಖಲಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.

ನಾಮಪತ್ರ ಸಲ್ಲಿಕೆ
ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್‌ ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ಚುನಾವಣೆ ನಡೆಯಲಿದ್ದು, ಮೈತ್ರಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್‌ ಗೆಲುವು ಬಹುತೇಕ ಖಚಿತ.

ಉಪ ಸಭಾಪತಿ ಆಯ್ಕೆ ಬಳಿಕ ರಾಜೀನಾಮೆ ಸಲ್ಲಿಸಲು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತೀರ್ಮಾನಿಸಿದ್ದಾರೆ. ಆದರೆ ಪರಿಷತ್‌ ಕಹಿ ಘಟನೆ ಕುರಿತು ಮಧ್ಯಾಂತರ ವರದಿ ಸಲ್ಲಿಕೆ ಯಾಗಿದೆ. ಅದನ್ನು ಮಂಡಿಸಿ ಚರ್ಚೆಗೆ ಅವಕಾಶ ಕೊಟ್ಟು ತಾಂತ್ರಿಕ ಕಾರಣ ಮುಂದಿಟ್ಟು ಮುಂದುವರಿಯಿರಿ ಎಂದು ಪಕ್ಷದ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.

Advertisement

ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆತ್ಮಸಾಕ್ಷಿ ಮತಗಳು ನಮಗೆ ಸಿಗಲಿವೆ ಎಂಬ ವಿಶ್ವಾಸವಿದೆ.
– ಸಿದ್ದರಾಮಯ್ಯ, ವಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next