Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Related Articles
Advertisement
ಕೆಐಎಡಿಬಿ ಅಧೀನದಲ್ಲಿರುವ ಸುಮಾರು 400 ಕೋಟಿ ಮೌಲ್ಯದ 116 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಎಂಬ ಆರ್.ಎಸ್.ಎಸ್ ನವರನ್ನು ಒಳಗೊಂಡ ಸಂಸ್ಥೆಗೆ ಮಾರಲು ನಿರ್ಧರಿಸಿದೆ. ಇದನ್ನು ಪ್ರಶ್ನಿಸಿದರೆ ಸಭಾಧ್ಯಕ್ಷರು ಸರ್ಕಾರದ ಕೈಗೊಂಬೆಯಂತೆ ವರ್ತಿಸಿದರು.
ಇದನ್ನೂ ಓದಿ : ಅಮೆರಿಕ ;ಕಮಲಾ ಹ್ಯಾರಿಸ್ ಗೆ ಅಜ್ಜ ಬಳಸಿದ ವಸ್ತುಗಳ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ
ಕೊರೊನಾದಿಂದ ಸತ್ತವರ ಲೆಕ್ಕದಲ್ಲೂ ಸರ್ಕಾರ ಸುಳ್ಳು ಹೇಳಿದೆ. ಹಿಂದಿನ ಮುಖ್ಯಮಂತ್ರಿ ಮೃತರ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲು ಮೂನ್ನೂರು ಕೋಟಿ ಘೋಷಣೆ ಮಾಡಿದ್ದರು. ಅವರು ಅಧಿಕಾರದಿಂದ ಇಳಿದು ಎರಡು ತಿಂಗಳಾಯಿತು. ಇನ್ನೂ ಒಂದು ಪೈಸೆ ಪರಿಹಾರ ಕೊಟ್ಟಿಲ್ಲ. ಶ್ರೀರಾಮುಲು ಪರಿಹಾರ ಕೊಟ್ಟಿದ್ದೀವಿ ಎಂದು ಹೇಳಿ ಸಿಕ್ಕಿಬಿದ್ದರು, ಕೊನೆಗೆ ಯಡಿಯೂರಪ್ಪ ಅವರೇ ಪರಿಹಾರ ಕೊಟ್ಟಿಲ್ಲ ಎಂದು ಸಮಜಾಯಿಷಿ ಹೇಳಿದರು.
ಲೋಕಸಭೆಯ ಸಭಾಧ್ಯಕ್ಷರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ದೇಶದ 75 ವರ್ಷಗಳ ಇತಿಹಾಸದಲ್ಲಿ, ವಿಧಾನಸೌಧ ಸ್ಥಾಪನೆಯಾಗಿ ಕಾರ್ಯಾರಂಭ ಮಾಡಿದ ದಿನದಿಂದ ಇವತ್ತಿನವರೆಗೆ ಲೋಕಸಭಾ ಸಭಾಧ್ಯಕ್ಷರು ವಿಧಾನಮಂಡಲದ ಜಂಟಿ ಅಧಿವೇಶನ ಕುರಿತು ಭಾಷಣ ಮಾಡಿಲ್ಲ.
ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯಲ್ಲಿ ಅಧಿವೇಶನಕ್ಕೆ ಆಗಮಿಸುವ ಮೂಲಕ ಪ್ರತಿಭಟನೆ ನಡೆಸಿದ್ದೇವೆ.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಆಸ್ಪತ್ರೆ ಬಿಲ್, ದಿನಸಿ ಪದಾರ್ಥ, ಬಸ್ ದರ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಸೇವೆಗಳ ಬೆಲೆ ಗಗನಕ್ಕೇರಿ, ಜನಸಾಮಾನ್ಯರು ಪರದಾಡುವಂತಾಗಿದೆ.
ಒಂದು ಮಧ್ಯಮ ವರ್ಗದ ಕುಟುಂಬದ ಜೀವನ ನಿರ್ವಹಣೆಯ ವೆಚ್ಚ ಇಂದು ದುಪ್ಪಟ್ಟಾಗಿದೆ, ಆದರೆ ಸಂಬಳ, ಪಿಂಚಣಿ, ಕೂಲಿ ಇವೆಲ್ಲವೂ ಹಿಂದಿನಷ್ಟೇ ಇದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ?