Advertisement

ಮಾಜಿ ಸಿಎಂ ಸಿದ್ದರಾಮಯ್ಯ ಕೋವಿಡ್ ವರದಿ ನೆಗೆಟಿವ್: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

09:54 AM Aug 12, 2020 | sudhir |

ಬೆಂಗಳೂರು : ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ.

Advertisement

ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ.

ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next