ಬೆಂಗಳೂರು : ಟೆಸ್ಟಿಂಗ್ ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಪಾಸಿಟಿವಿಟಿ ರೇಟ್ ಶೇ. 5ರೊಳಗೆ ಬರುವ ವರೆಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ.
ಲಾಕ್ ಡೌನ್ ಮತ್ತಿತರ ವಿಷಯದಲ್ಲಿ ತಜ್ಞರ ಸಲಹೆಯನ್ನು ಸರ್ಕಾರ ಚಾಚೂತಪ್ಪದೆ ಪಾಲಿಸಬೇಕು. ಎಲ್ಲರಿಗೂ ಲಸಿಕೆ ಹಾಕುವುದೊಂದೇ ಕೊರೊನಾದಿಂದ ದೂರ ಇರುವ ಮಾರ್ಗ.
12 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಎಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಬೇಕು. ಡಿಸೆಂಬರ್ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು.
ಇದನ್ನೂ ಓದಿ :ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸೌಲಭ್ಯಗಳ ಮೇಕ್ ಶಿಫ್ಟ್ ಆಸ್ಪತ್ರೆ ಸಿದ್ಧ : ಆರ್ ಅಶೋಕ್
ದೇಶಕ್ಕೆ 216 ಕೋಟಿ ಹಾಗೂ ರಾಜ್ಯಕ್ಕೆ 9 ಕೋಟಿ ಡೋಸ್ ನಷ್ಟು ಲಸಿಕೆ ಬೇಕಿದೆ. ಈಗಿನಂತೆ ತೆವಳುತ್ತಾ ಸಾಗಿದರೆ ಎಲ್ಲರಿಗೂ ಲಸಿಕೆ ಹಾಕಲು 3-4 ವರ್ಷಗಳೇ ಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.