Advertisement
ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಯ ಕುರಿತು ತೆಗೆದುಕೊಂಡ ತೀರ್ಮಾನಗಳು ಸಮುದಾಯಗಳಲ್ಲಿ ಹಲವು ರೀತಿಯ ಗೊಂದಲ, ಅಶಾಂತಿಯನ್ನು ಹುಟ್ಟು ಹಾಕಿವೆ ಎಂದು ಹೇಳಿದರು.
Related Articles
Advertisement
ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಸುಂಟರಗಾಳಿ ಕನಿಷ್ಠ 23 ಮಂದಿ ಮೃತ್ಯು
ಸರ್ಕಾರದ ಅಮಾನವೀಯ ನಿರ್ಧಾರದಿಂದ ಅತಿ ಹೆಚ್ಚು ಅನ್ಯಾಯಕ್ಕೆ ಒಳಗಾಗಿರುವವರು ಪ್ರವರ್ಗ-1, ಪ್ರವರ್ಗ- 2 ಗಳಲ್ಲಿ ಹಿಂದುಳಿದವರು ಮತ್ತು ಪ್ರವರ್ಗ- 2 ಬಿರಲ್ಲಿದ್ದ ಮುಸ್ಲಿಮರು. ಈ ಮೂರೂ ಪ್ರವರ್ಗಗಳಲ್ಲಿ ಶೇ.48-50 ರಷ್ಟು ಜನಸಂಖ್ಯೆ ಇದೆಯೆಂದು ಹಲವು ವರದಿಗಳು ಹೇಳಿವೆ. ಇಷ್ಟು ಜನಸಂಖ್ಯೆಗೆ ಈಗ ಕೇವಲ ಶೇ.19 ರಷ್ಟು ಮಾತ್ರ ಮೀಸಲಾತಿ ಇದೆ. ಪ್ರವರ್ಗ–1 ರಲ್ಲಿ ಬೆಸ್ತರು, ಮೊಗವೀರರು, ಗೊಲ್ಲರು, ಉಪ್ಪಾರರು, ದಾಸರು ಸೇರಿದಂತೆ 95 ಜಾತಿಗಳಿವೆ. ಈ ಜಾತಿಗಳಲ್ಲಿ ಸುಮಾರು 80 ಲಕ್ಷದಷ್ಟು ಜನಸಂಖ್ಯೆ ರಾಜ್ಯದಲ್ಲಿದೆ. ಒಟ್ಟಾರೆ ಜನಸಂಖ್ಯೆಯ ಶೇ.12 ರಷ್ಟು ಜನರು ಈ ಪ್ರವರ್ಗದಲ್ಲಿದ್ದಾರೆ.
ಒಳಮೀಸಲಾತಿಯ ಕುರಿತು ಈಗ ಪ್ರಾರಂಭವಾಗಿರುವ ಭಿನ್ನಾಭಿಪ್ರಾಯಗಳನ್ನು ಎಲ್ಲ ಸಂಬಂಧಿತ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ಸಮ್ಮತವಾಗುವ ತೀರ್ಮಾನವನ್ನು ಕೂಡಲೆ ತೆಗೆದುಕೊಂಡು ಇದನ್ನೂ ಸಹ ಶೆಡ್ಯೂಲ್ 9ಕ್ಕೆ ಸೇರಿಸಿ ಆದೇಶ ಹೊರಡಿಸಬೇಕು.
ಪ್ರವರ್ಗ 2ಎ ಗೆ ಸಂಬಂಧಿಸಿದಂತೆಯೂ ಮೀಸಲಾತಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಉಳಿದ ಜಾತಿಗಳಿಗೆ ಸಿಗುತ್ತಿರುವಂತೆ ಹೆಚ್ಚಿಸಬೇಕು. ಈ ಪ್ರವರ್ಗದಲ್ಲಿರುವ ಅನೇಕ ಜಾತಿಗಳು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿಸಬೇಕೆಂದು ಶೀಫಾರಸ್ಸುಗಳಾಗಿವೆ ಹಾಗೂ ಬೇಡಿಕೆಗಳನ್ನು ಮಂಡಿಸಲಾಗಿದೆ. ಅವುಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕು. ಪ್ರವರ್ಗ2-ಬಿ ರಲ್ಲಿರುವ ಮುಸ್ಲಿಮರಿಗೆ ಹಿಂದೆ ಇದ್ದ ಮೀಸಲಾತಿಯನ್ನು ಮುಂದುವರೆಸಬೇಕು. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದವರು ಧರ್ಮ ಬೇರೆ ಎಂಬ ಕಾರಣಕ್ಕೆ ತಾರತಮ್ಯ ಮಾಡುವುದು ಅಮಾನವೀಯ ಹಾಗೂ ಸಂವಿಧಾನ ಬಾಹಿರ ಎಂದು ಹೇಳಿದರು.
ಇದನ್ನೂ ಓದಿ : ಮೂಳೂರು: ಬೈಕ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು
ಪ್ರವರ್ಗ-2ಸಿ, 2ಡಿ ಎಂದು ಹೊಸ ಪ್ರವರ್ಗಗಳನ್ನು ಸೃಷ್ಟಿಸಿ ಎ ಮತ್ತು 3 ಬಿ ಪ್ರವರ್ಗಗಳನ್ನು ರದ್ದು ಮಾಡಿರುವ ಕುರಿತಂತೆ ನಮ್ಮ ವಿರೋಧವೇನೂ ಇಲ್ಲ. ಆದರೆ ಈ ಪ್ರವರ್ಗಗಳಿಗೆ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ವಿಚಾರದಲ್ಲೂ ನಮ್ಮ ಸಹಮತಿ ಇದೆ. ಆದರೆ ಪ್ರವರ್ಗ 2ಬಿಯಲ್ಲಿನ ಮುಸಲ್ಮಾನರ ಮೀಸಲಾತಿಯನ್ನು ರದ್ದು ಪಡಿಸುವುದರ ಬದಲಿಗೆ ಇಡಬ್ಲ್ಯುಎಸ್‍ನಲ್ಲಿನ ಹೆಚ್ಚುವರಿ ಮೀಸಲಾತಿಯನ್ನು ಈ ಎರಡು ಪ್ರವರ್ಗಗಳಿಗೆ ಹಂಚಿಕೆ ಮಾಡಿ ಸಮಸ್ಯೆಯನ್ನು ಬಗೆಹರಿಸಿದ್ದರೆ ಅದು ಮುತ್ಸದ್ಧಿತನವಾಗುತ್ತಿತ್ತು.
ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕೇವಲ ಚುನಾವಣಾ ಗಿಮಿಕ್ಕು. ಹಣೆಗೆ ತುಪ್ಪ ಹಚ್ಚಿ, ಕಿವಿಗೆ ಹೂ ಇಡುವ ತಂತ್ರವಲ್ಲದೆ ಬೇರೇನೂ ಅಲ್ಲ ಎಂಬುದು ಸಾಮಾನ್ಯ ತಿಳುವಳಿಕೆ ಇರುವ ಎಲ್ಲರಿಗೂ ಅರ್ಥವಾಗುತ್ತದೆ ಎಂದು ಕಿಡಿಕಾರಿದ್ದಾರೆ.