Advertisement
ಈ ಕುರಿತು ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ 57 ರೂ. ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂ. ಆಗಿರುವುದು ಯಾಕೆ ಎಂದಿದ್ದಾರೆ.
Related Articles
Advertisement
ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು 7,200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ 9.20 ರೂ. ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಹಾಗೆಯೇ ಉಳಿದುಕೊಂಡಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ 1.16 ಲಕ್ಷ ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ 3.22 ಲಕ್ಷ ಕೋಟಿ ರೂ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ ಎಂದು ಕೇಳಿದ್ದಾರೆ.