Advertisement
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ.
Related Articles
Advertisement
ಇದನ್ನೂ ಓದಿ :ಯಡಿಯೂರಪ್ಪ ಮುಂದುವರೆಯಲಿ: ಕುಮಾರಸ್ವಾಮಿ
ಇದೇ ಸಂದರ್ಭದಲ್ಲಿ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಹಿಂದುಳಿದ, ಅಲ್ಪಸಂಖ್ಯಾತರ, ಮಹಿಳಾ ಹಾಗೂ ಎಸ್‌ಸಿ ಘಟಕಗಳಿಗೆ ಅಧ್ಯಕ್ಷರ ನೇಮಕ ಕುರಿತು ರಾಹುಲ್‌ಗಾಂಧಿಯವರಿಗೆ ಪಟ್ಟಿ ಕೊಟ್ಟು ಬಂದಿದ್ದಾರೆ. ತಮ್ಮ ಆಪ್ತರು ಹಾಗೂ ಬೆಂಬಲಿಗರ ಹಿತ ಕಾಯುವ ಅನಿವಾರ್ಯತೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ತಳಮಳಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುಜೇìವಾಲಾ ಸಮ್ಮುಖದಲ್ಲಿ ಮಾತುಕತೆಯ ನಂತರ ಸಿದ್ದರಾಮಯ್ಯ ಅವರ ಜತೆ ಪ್ರತ್ಯೇಕವಾಗಿ ಮಾತನಾಡಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ತಳಮಳ ಸೃಷ್ಟಿಸಿದೆ.
ಸಿದ್ದರಾಮಯ್ಯ ಅವರ ಜತೆ ರಾಹುಲ್‌ಗಾಂಧಿ ಪ್ರತ್ಯೇಕ ಮಾತುಕತೆ ಕುರಿತು ಹಿರಿಯ ನಾಯಕರೂ ತಲೆಬಿಸಿ ಮಾಡಿಕೊಂಡಿದ್ದು ಮುಂದಿನ ಸಿಎಂ ಹೇಳಿಕೆ ವಿಚಾರವಾಗಿ ಹೈಕಮಾಂಡ್‌ವರೆಗೂ ಸಿದ್ದರಾಮಯ್ಯ ವಿರುದ್ಧ ಹಿರಿಯ ನಾಯಕರು ದೂರು ಕೊಟ್ಟು ಬಂದಿದ್ದರು. ಇದೀಗ ರಾಹುಲ್‌ಗಾಂಧಿ, ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದರಿಂದ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಬಹುದು ಎಂದು ಹೇಳಲಾಗಿದೆ. ರಾಹುಲ್‌ಗಾಂಧಿ ಭೇಟಿಯ ನಂತರ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ್‌ಸಿಂಗ್, ಎ.ಕೆ.ಆ್ಯಂಟನಿ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಿದ್ದರಾಮಯ್ಯ ಪ್ರತ್ಯೇಕವಾಗಿಯೇ ಮಾತುಕತೆ ನಡೆಸಿದ್ದಾರೆ. ರಾಹುಲ್‌ಗಾಂಧಿಯವರ ಸೂಚನೆ ಮೇರೆಗೆ ಈ ಭೇಟಿ ನಡೆದಿದೆ ಎಂದು ಹೇಳಲಾಗಿದ್ದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿವೆ. ಎಂಬಿಪಿ ಟ್ವೀಟ್ ಗೊತ್ತಿತ್ತು
*ಈ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿರುವ ಬಿ.ಎಸ್.ಯಡಿಯೂರಪ್ಪ ಪರ ಎಂ.ಬಿ.ಪಾಟೀಲ್ ಅವರ ಟ್ವೀಟ್ ವಿಚಾರ ಸಿದ್ದರಾಮಯ್ಯ ಅವರಿಗೆ ಗೊತ್ತಿತ್ತು. ಸಮುದಾಯವಾಗಿ ನಾವು ಅವರ ಜತೆ ನಿಲ್ಲಲೇಬೇಕಿದೆ. ಇದು ಭವಿಷ್ಯದಲ್ಲಿ ನಮಗೂ ಒಳ್ಳೆಯದು ಎಂದು ಎಂ.ಬಿ.ಪಾಟೀಲ್ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿಯೇ ಟ್ವೀಟ್ ಮಾಡಿದ್ದರು ಎಂಬ ಮಾತುಗಳು ಕೇಳಿರುತ್ತಿವೆ.