Advertisement

ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಲಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

08:37 PM Dec 19, 2020 | sudhir |

ಬೆಂಗಳೂರು: ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಅವರು, ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಹೇಳಿಕೆ ತಪ್ಪು ಗ್ರಹಿಕೆಯಿಮದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದಾರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ನೆರೆ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ ಗೌರವವೂ ಇದೆ. ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ. ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟು ಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು, ಕೊಡವರು ಬೀಫ್ ತಿನ್ನುತ್ತಾರೆಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬರಿಗಾಲಲ್ಲೇ ಏಕಾಂಗಿಯಾಗಿ ಮತಯಾಚನೆಗೆ ಹೊರಟ ನಿಡುವಾಳೆ ಕ್ಷೇತ್ರದ ಚುನಾವಣಾ ಅಭ್ಯರ್ಥಿ

Advertisement

Udayavani is now on Telegram. Click here to join our channel and stay updated with the latest news.

Next