Advertisement
ಸುದ್ದಿಗಾರರ ಜತೆ ಮಾತನಾಡಿದ ಆವರು, ಬೆಳಗಾವಿಯಲ್ಲಿ ಬಿಜೆಪಿ ಬಹುಮತ ಗಳಿಸಿದ್ದರೆ, ಕಲಬುರಗಿಯಲ್ಲಿ ನಾವು ಬಹುಮತ ಪಡೆದಿದ್ದೇವೆ. ಇನ್ನುಳಿದ ಕಡೆ ಯಾವ ಪಕ್ಷವೂ ಸ್ಪಷ್ಟ ಬಹುಕತ ಪಡೆದಿಲ್ಲ ಹೀಗಾಗಿ ಇದು ಕಾಂಗ್ರೆಸ್‌ನ ಸೋಲಲ್ಲ ಎಂಬುದು ನನ್ನ ಭಾವನೆ ಎಂದು ತಿಳಿಸಿದರು.
Related Articles
Advertisement
ಹುಬ್ಬಳ್ಳಿ ಧಾರವಾಡದಲ್ಲಿ ನಾವು 33 ಸ್ಥಾನಗಳನ್ನು ಗೆದ್ದಿರುವುದು ನಮಗೆ ಒಂದು ಧನಾತ್ಮಕ ಬೆಳವಣಿಗೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಿಕೊಳ್ಳಬೇಕು ಎಂದರು.
ನಾನು ಯಾವತ್ತೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ, ಹಾಗೆ ಈ ಬಾರಿಯೂ ಹೋಗಿಲ್ಲ .ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿ ಸ್ಥಳೀಯ ನಾಯಕರು ಮಾಡ್ತಾರೆ ಎಂದು ಹೇಳಿದರು.
ಆಕ್ರೋಶತಾಲಿಬಾನಿಗಳಿಂದ ಭಾರತದಲ್ಲಿ ಬೆಲೆಯೇರಿಕೆ ಆಗುತ್ತಿದೆ ಎಂಬ ಅರವಿಂದ ಬೆಲ್ಲದ್ ಹೇಳಿಕೆ ದಡ್ಡತನದ ಪರಮಾವಧಿ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಆಗಿದೆಯಾ ಎಂಬುದು ಮುಖ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 80 ರೂ. ಇದ್ದ ಅಡುಗೆ ಎಣ್ಣೆ 200 ರೂಪಾಯಿ ಆಗಿದೆ, ಇದಕ್ಕೆ ತಾಲಿಬಾನಿಗಳು ಕಾರಣವೇ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿ, ಪೆಟ್ರೋಲ್ ದರ ಏರಿಕೆಗೆ ತಾಲಿಬಾನಿಗಳು ಕಾರಣ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ತಾಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಆಯೋಗ ರಚನೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದೆಲ್ಲ ಕಾಲಹರಣ ಮಾಡಲು ನೆಪಗಳು ಅಷ್ಟೆ. ಈಗಲೇ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ. ಸೋಲಿನ ಭಯದಿಂದ ಚುನಾವಣೆ ಮುಂದೂಡಲು ಹೊರಟಿದ್ದಾರೆ.
– ಸಿದ್ದರಾಮಯ್ಯ