Advertisement
ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡಾ ಹೌದು, ಜಾತಿ ಆಧಾರಿತ ನಿಗಮ ಪ್ರಾಧಿಕಾರ ಸ್ಥಾಪನೆ ಕುರಿತು ಮಾತನಾಡಿದ ಅವರು ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ ಎಂದಿದ್ದಾರೆ.
Related Articles
Advertisement
ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ ರಾಜ್ಯದಾದ್ಯಂತ ಕನ್ನಡಿಗರು ಮತ್ತು ಮರಾಠಿಗರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈಗ ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನವನ್ನು ರಾಜ್ಯಸರ್ಕಾರ ಮಾಡಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೊಣೆಯಾಗುತ್ತಾರೆ ಎಂದು ಗುಡುಗಿದರು.
ಇದನ್ನೂ ಓದಿ:ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಅಪಾಯದಿಂದ ಪಾರಾದ ಯಾತ್ರಾರ್ಥಿಗಳು !
ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ,ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯಾವ ಕಾರ್ಯಕ್ರಮವೂ ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ರಾಜಕೀಯ ದ್ವೇಷದಿಂದ ಈ ಕಾರ್ಯಕ್ರಮಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಬಜೆಟ್ ಬೆಂಬಲ ಇಲ್ಲದ ಯೋಜನೆಗಳನ್ನು ಘೋಷಿಸುವ ಗಿಮಿಕ್ ಮಾಡುತ್ತಿದೆ.