Advertisement
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಿಂದ ನರೇಂದ್ರ ಮೋದಿ ಸರ್ಕಾರವು 3 ಲಕ್ಷ ಕೋಟಿ ರೂಗಳಷ್ಟು ವಿವಿಧ ರೂಪದ ತೆರಿಗೆಗಳನ್ನು ಸಂಗ್ರಹಿಸಿ ರಾಜ್ಯಕ್ಕೆ ವಾಪಸ್ಸು ನೀಡುತ್ತಿರುವುದು ಕೇವಲ 43 ಸಾವಿರ ಕೋಟಿ ರೂ. ಇದರಿಂದ ರಾಜ್ಯದ ಆರ್ಥಿಕತೆಯೂ ದಿಕ್ಕುತಪ್ಪಿದೆ. 2018ರವರೆಗೆ 2.42 ಲಕ್ಷ ಕೋಟಿಗಳಷ್ಟಿದ್ದ ರಾಜ್ಯದ ಸಾಲ ಈಗ 4.57 ಲಕ್ಷ ಕೋಟಿಗಳಷ್ಟಾಗಿದೆ.ಇದಕ್ಕೆ ಮೋದಿಗೆ ಶ್ಲಾಘನೆ ಮಾಡಬೇಕಾ ಎಂದು ಪ್ರಶ್ನಿಸಿದರು.
Related Articles
Advertisement
ಕಾಂಗ್ರೆಸ್ ಸರ್ಕಾರ ಇದ್ದಾಗ ಬಂಡವಾಳ ಆಕರ್ಷಣೆಯಲ್ಲಿ ದೇಶದಲ್ಲಿ 1 ಅಥವಾ 2 ನೇ ಸ್ಥಾನದಲ್ಲಿ ಕರ್ನಾಟಕ ಇತ್ತು. ಈಗ ಓಲಾ ಬೈಕ್, ಏಥರ್, ಟಾಟಾ ಎಲೆಕ್ಟ್ರಾನಿಕ್ಸ್ ಮುಂತಾದ ಬೃಹತ್ ಬಂಡವಾಳದ ಕಂಪೆನಿಗಳು 10000 ಕೋಟಿ ಬಂಡವಾಳ ಹೂಡಲು ತಯಾರಿದ್ದವು. ಆದರೆ ಈ ಸರ್ಕಾರ ಆಸಕ್ತಿ ವಹಿಸದ ಕಾರಣ ತಮಿಳುನಾಡಿನ ಪಾಲಾದವು. ರಾಜ್ಯವು ಕೈಗಾರಿಕಾಭಿವೃದ್ಧಿಯಲ್ಲೂ ಹಿಂದೆ ಬಿದ್ದಿದೆ ಎಂದು ದೂರಿದ್ದಾರೆ.
ಎನ್‌ಇಪಿಯಂತ ಮನೆಹಾಳು ನೀತಿಗಳನ್ನು ಸರ್ಕಾರ ಸಾಧನೆ ಎಂದು ಹೇಳಲಾಗಿದೆ. ಕಾಲೇಜು- ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕರುಳಿಲ್ಲ, ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕಗಳಿಲ್ಲ ಎಂದು ಹೇಳಿದ್ದಾರೆ.