Advertisement

ಹುಣಸೋಡು ಸ್ಫೋಟ ಪ್ರಕರಣದ ತನಿಖೆ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಲಿ : ಸಿದ್ದರಾಮಯ್ಯ

04:38 PM Jan 27, 2021 | Team Udayavani |

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರಿಂದಲೇ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

Advertisement

ಹುಣಸೋಡು ಪ್ರದೇಶಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲುಗಂಗೂರು ಗ್ರಾಮದ ಸರ್ವೆ ನಂ.02 ನಲ್ಲಿ ಕ್ರಷರ್ ನಡೆಯುತ್ತಿದೆ. ಆ ಜಮೀನು ಕುಲಕರ್ಣಿ ಎಂಬುವರಿಗೆ ಸೇರಿದ್ದು, ಸುಧಾಕರ್ ಲೀಸಿಗೆ ಪಡೆದು ಕ್ರಷರ್ ನಡೆಸುತ್ತಿದ್ದಾರೆ. ಆದರೆ ಈ ಸ್ಥಳದಲ್ಲಿ 21 ನೇ ತಾರೀಕಿನಂದು ಸ್ಫೋಟ ಸಂಭವಿಸಿದೆ ಆದರೂ ಅಧಿಕಾರಿಗಳಿಗೆ ಗೊತ್ತಿಲ್ಲ ಎಂದು ಕಿಡಿಕಾರಿದರು.

ಸ್ಪೋಟದ ಕುರಿತು ಪೋಲೀಸ್ ಅಧಿಕಾರಿಗಳು ಆಂಧ್ರಪ್ರದೇಶದಿಂದ ಜಿಲೆಟಿನ್ ಕಡ್ಡಿಗಳು ಬಂದಿವೆ ಎನ್ನುತ್ತಿದ್ದಾರೆ. ಜಿಲೆಟಿನ್ ಕಡ್ಡಿಗಳನ್ನು ಸರಬರಾಜು ಮಾಡುವ ಆಂಧ್ರದ ವ್ಯಕ್ತಿಯು ಸ್ಫೋಟಕಗಳ ಪೂರೈಕೆಗೆ ಅನುಮತಿ ಪಡೆಯಬೇಕು.ಆದರೆ ಸುಧಾಕರ್ ಈ ಸ್ಫೋಟಕಗಳ ಬಳಕೆ ಬಗ್ಗೆ ಯಾವುದೇ ಇಲಾಖೆಯ ಅನುಮತಿ ಪಡೆದಿಲ್ಲ, ಹಲವು ವರ್ಷದಿಂದ ಇಲ್ಲಿ ಅಕ್ರಮ ನಡೆಯುತ್ತಿದ್ದರೂ, ಯಾವುದೇ ಕ್ರಮ ಜರುಗಿಸಿಲ್ಲ ಕೇವಲ ಕಣ್ಣೋರೆಸುವ ತಂತ್ರವಾಗಿ ಕೆಲವೊಮ್ಮೆ ದಂಡ ಹಾಕಿ ಬಿಡುತ್ತಿದ್ದಾರೆ. ಹಾಗಾಗಿ ಇದನ್ನೇಲ್ಲಾ ಗಮನಿಸಿದರೆ ರಾಜಕೀಯ ಪ್ರಭಾವ ಇರೋದು ಕಂಡುಬರುತ್ತಿದೆ ಎಂದರು.

ಇದನ್ನೂ ಓದಿ:ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್

ನಂತರ ಮಾತನಾಡಿದ ಅವರು ಸಿಎಂ ಯಡಿಯೂರಪ್ಪ ಹಾಗೂ ಉಸ್ತುವಾರಿ ಸಚಿವರ ಗಮನಕ್ಕೆ ಬರದೇ ಅಕ್ರಮವಾಗಿ ನಡೆಯುತ್ತಿವೆಯೇ..? ಅಕ್ರಮದ ಬಗ್ಗೆ ಯಾರಾದ್ರೂ ಕಾರ್ಯಕರ್ತರೊಬ್ಬರು ಅವರ ಗಮನಕ್ಕೆ ತಂದಿಲ್ಲವೇ..? ಎಂದ ಅವರು ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರೇ ಅಧಿಕಾರಿಗಳಿಗೆ ಸುಮ್ಮನ್ನಿರಿ ಎಂದರೇ ಏನು ಮಾಡಲು ಸಾಧ್ಯ. ಅಕ್ರಮ ನಡೆಯುತ್ತಿರುವುದರ ಜವಾಬ್ದಾರಿಯನ್ನು ಅಧಿಕಾರದಲ್ಲಿರುವವರೇ ಹೊರಬೇಕು. ಕ್ವಾರಿಯಲ್ಲಿ ಅನುಮತಿ ಇಲ್ಲದೇ ಸ್ಫೋಟ ಮಾಡುತ್ತಿದ್ದರೇ, ಜಿಲ್ಲಾಡಳಿತ ಇಷ್ಟು ಸಮಯ ಏಕೆ ನಿದ್ರಾವಸ್ಥೆಯಲ್ಲಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

Advertisement

ಸರಕಾರ ಮೃತಪಟ್ಟ ಕಾರ್ಮಿಕರಿಗೆ 5 ಲಕ್ಷ ರೂ. ಘೋಷಣೆ ಮಾಡಿದೆ. ಅದ್ರೇ, ತಾಂತ್ರಿಕ ಕಾರಣದಿಂದ ಇದುವರೆಗೂ ಮೃತರಿಗೆ ಹಣ ಕೊಟ್ಟಿಲ್ಲ.. ಮಾನವೀಯತೆ ಆಧಾರದ ಮೇಲೆ ತಕ್ಷಣವೇ ಪರಿಹಾರ ಕೊಡಬೇಕು.. ಜೊತೆಗೆ ಹೆಚ್ಚಿನ ಮೊತ್ತದ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ.

ಮೃತರಿಗೆ ಹೆಚ್ಚಿನ ಪರಿಹಾರದ ಜೊತೆಗೆ, ಆರೋಪಿಗಳ ವಿರುದ್ಧ ಮರ್ಡರ್ ಕೇಸ್ ದಾಖಲಿಸಬೇಕು. ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಜಿಲ್ಲಾಧಿಕಾರಿಗಳಿಂದ ತನಿಖೆ ಮಾಡಿಸಿದರೇ ಆರೋಪಿಗಳಿಗೆ ಹೇಗೆ ಶಿಕ್ಷೆಯಾಗುತ್ತೇ ಎಂದು ಸರಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next