Advertisement

ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು

10:11 AM Aug 10, 2022 | Team Udayavani |

ಹುಬ್ಬಳ್ಳಿ : ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ ಆರ್ ಎಸ್ ಎಸ್ ನ ಕೆಲವರು ರಾಷ್ಟ್ರಧ್ವಜ ಬೇಡ ಅಂದಿದ್ದವರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಮಾಡಿದ್ದರು. ಆರ್ ಎಸ್ ಎಸ್ ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ ಎಂದು ಪ್ರಶ್ನಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟ ತೊರೆಯುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಯಾವ ಮನಸ್ತಾಪದಿಂದ ಅವರು ಹೊರಗೆ ಬಂದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರೊಬ್ಬ ಸಮಾಜವಾದಿ ಹಿನ್ನೆಲೆಯಿಂದ ಬಂದ್ದವರು. ಕೋಮುವಾದಿ ಪಕ್ಷ ಬಿಟ್ಟಿದ್ದು ಒಳ್ಳೆಯದು ಎಂದರು.

ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಮೂರನೆಯವರಾದರು ಬರಲಿ ನಾಲ್ಕನೆಯವರಾದರು ಬರಲಿ ನಮಗೇನು ಸಂಬಂಧವಿಲ್ಲ. ಬಿ.ಎಸ್. ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿವರ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಟ್ವಿಟ್ ಮಾಡಿದವರನ್ನು ಕೇಳಿ, ನಾನಂತು ಟ್ವಿಟ್ ಮಾಡಿಲ್ಲ.

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಕಾನೂನು ವಿವಾದ ಮಾಹಿತಿ ಇಲ್ಲ. ಅಲ್ಲಿ ಮೊದಲಿನಂತೆ ಏನು ನಡೆಯುತಿತ್ತು ಗೊತ್ತಿಲ್ಲ.

Advertisement

ಬಾದಾಮಿಯಲ್ಲಿ ನಾನು ಸ್ಪರ್ಧಿಸೋ ಬಗ್ಗೆ ಇನ್ನು ನಿರ್ಧರಿಸಿಲ್ಲ. ಸದ್ಯ ನಾನು ಬಾದಾಮಿಯ ಶಾಸಕ, ಮುಂದಿನ ಚುನಾವಣೆಯ ಬಗ್ಗೆ ನಾನೇ ಹೇಳುತ್ತೇನೆ ಎಂದರು.

ಇದನ್ನೂ ಓದಿ : ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next