ಬೆಂಗಳೂರು: ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಟ್ವೀಟ್ ಮಾಡುವ ಮೂಲಕ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದರು.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದ್ದಾರೆ.
ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: