Advertisement

ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋದರೂ ಸರಕಾರಕ್ಕೆ ಚಿಂತೆಯೇ ಇಲ್ಲ: ಸಿದ್ದರಾಮಯ್ಯ ಕಿಡಿ

12:11 PM Aug 19, 2020 | sudhir |

ಬೆಂಗಳೂರು : ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದಾರೆ ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

Advertisement

ಕಳೆದ ವರ್ಷ ಅತಿವೃಷ್ಟಿ ಪರಿಹಾರದಲ್ಲಿ ಆದ ವೈಫಲ್ಯದಿಂದ ಈ ಬಾರಿ ಜನರ ಕಷ್ಟ ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ ಎಂದರು. ಸರಕಾರದ ವಿರುದ್ಧ ತಮ್ಮ ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ ಸರಕಾರ ಅತಿವೃಷ್ಟಿಯಿಂದ ಕಂಗೆಟ್ಟ ಜನರಿಗೆ ಪರಿಹಾರ ಕೊಡುವ ಕೆಲಸ ಮಾಡುವ ಬದಲು ಕಂದಾಯ ಸಚಿವರು ಬೆಂಗಳೂರಿನಲ್ಲಿ ಕುಳಿತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅವರಿಗೆ ಬೆಂಗಳೂರಿನಲ್ಲಿ ಏನು ಕೆಲಸ ಎಂದು ಕಿಡಿಕಾರಿದ್ದು ಮುಖ್ಯಮಂತ್ರಿಗಳು ಮೊದಲು ಕಂದಾಯ ಸಚಿವರನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ಕಳುಹಿಸಿಕೊಡಿ ಎಂದು ಹೇಳಿದ್ದಾರೆ.

ಕ್ಷೇತ್ರದ ಜನರಲ್ಲಿ ಕ್ಷಮೆ:
ಕೋವಿಡ್ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ,ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next