ಚಿಕ್ಕಮಗಳೂರು : ಬಿಜೆಪಿಯ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ತ್ರದಿಂದ ಸಿದ್ದರಾಮಯ್ಯ ಅವರು ಚುನಾವಣಾ ಸ್ಪರ್ಧೆಗೆ ಇಳಿಯುವಂತೆ ಕಿಸಾನ್ ಕಾಂಗ್ರೆಸ್ ಒತ್ತಾಯ ಮಾಡಿದೆ.
ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಬಿಜೆಪಿಯ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿ ಬಿಜೆಪಿಯನ್ನು ಧೂಳಿಪಟ ಮಾಡಬೇಕೆಂದು ಕಿಸಾನ್ ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ಬಿಜೆಪಿ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವಂತೆ ಕಿಸಾನ್ ಕಾಂಗ್ರೆಸ್ ಸೆಲ್ ಒತ್ತಡ ಹೇರಿದೆ.
ಒಂದುಕಡೆ ಗೆಲುವಿನ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಇದೇ ಹೊತ್ತಿನಲ್ಲಿ ಚಿಕ್ಕಮಗಳೂರು ವಿಧಾಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ಒತ್ತಡ ಹೇರಲಾಗುತ್ತಿದ್ದು ಯಾವ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಕುಣಿಗಲ್: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕ; ಮರವೇರಿ ಪ್ರಾಣ ರಕ್ಷಣೆ