Advertisement

ಕೋವಿಡ್ ಸ್ಥಿತಿಯಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ :ಸಿದ್ದರಾಮಯ್ಯ

05:19 PM Jun 10, 2021 | Team Udayavani |

ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆ  ಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್‌ ರೂಪದಲ್ಲಿ ಹಣ ನೀಡುವು ದನ್ನು ತಡೆ ಹಿಡಿಯಲು ಆದೇಶ ಮಾಡಿರುವುದಾಗಿ ಮುಜರಾಯಿ ಸಚಿವ  ಕೋಟ ಶ್ರೀನಿವಾಸ ಪೂಜಾರಿ ಹೇಳಿರುವ ಬೆನ್ನಿಗೆ ಸಿದ್ದರಾಮಯ್ಯ  ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವಿಟ್ ಮೂಲಕ ಆಕ್ರೊಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದುವರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ : ಕಿಮ್ಸ್‌ ಗೆ 48 ಲಕ್ಷ ರೂ.ಮೌಲ್ಯದ ವೈದ್ಯಕೀಯ ಸಲಕರಣೆ ದೇಣಿಗೆ

ಕೋವಿಡ್ ಸಂಕಷ್ಟ ಯಾರನ್ನೂ ಬಿಟ್ಟಿಲ್ಲ, ಹೀಗಿರುವಾಗ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.


ಇನ್ನು, ಈ ಬಗ್ಗೆ ನಿನ್ನೆ(ಗುರುವಾರ, ಜೂನ್ 09) ಹೇಳಿಕೆ ನೀಡಿದ್ದ ಸಚಿವ ಕೋಟ, ಇತರ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ ಆಯಾ ಇಲಾಖೆಯಿಂದ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಹೇಳಿದ್ದರು.

Advertisement

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದ್ರಸಾಗಳಿಗೆ ತಸ್ತೀಕ್‌ ನೀಡುವುದಕ್ಕೆ ವಿಹಿಂಪ, ಬಜರಂಗದಳ ಸಹಿತ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಇದನ್ನೂ ಓದಿ : ಪಡುಬಿದ್ರಿ: ಪೊಲೀಸ್ ಸಿಬ್ಬಂದಿಗೆ ಆ್ಯಂಬುಲೆನ್ಸ್ ಢಿಕ್ಕಿ; ಅಪಾಯದಿಂದ ಪಾರು

Advertisement

Udayavani is now on Telegram. Click here to join our channel and stay updated with the latest news.

Next