Advertisement

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ಸಿದ್ಧೇಶ್ವರ ಶ್ರೀಗಳು ಕ್ಷೇಮವಾಗಿದ್ದಾರೆ

06:12 PM Jan 11, 2022 | Team Udayavani |

ವಿಜಯಪುರ : ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ. ಹೀಗಾಗಿ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಹಾಗೂ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

Advertisement

ಈ ಕುರಿತು ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗಶ್ರೀಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಿದ್ದು, ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮಕ್ಕೆ ಪ್ರವಚಕ್ಕಾಗಿ ಆಗಮಿಸಿದ್ದ ಸಂದರ್ಭದಲ್ಲಿ ವಾಸ್ತವ್ಯ ಇದ್ದ ಕೋಣೆಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಬಲಗಾಲಿಗೆ ಸ್ವಲ್ಪ ಪೆಟ್ಟಾಗಿದೆ.

ಮಹಾರಾಷ್ಟ್ರದ ಕನ್ಹೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳು ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರಣ ಯಾರೂ ಗಾಬರಿಯಾಗದಿರಿ. ಅಲ್ಲದೇ ಸದ್ಯ ಹರಿದಾಡುತ್ತಿರುವ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದೂ ಬಸವಲಿಂಗ ಶ್ರೀಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ : ಕಷ್ಟಪಟ್ಟು ದುಡಿಯುವುದು ಬಿಟ್ಟು ಅಡ್ಡದಾರಿಯಲ್ಲಿ ಹೊಟ್ಟೆಗೆ ಹಿಟ್ಟು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next