Advertisement

ಗೋವಾದಲ್ಲಿ ಕನ್ನಡ ಭಾಷೆ,ಕನ್ನಡ ಜನತೆ ಒಳಿತಿಗಾಗಿ ಹಗಲಿರುಳು ಶೃಮಿಸುತ್ತೇನೆ: ಸಿದ್ಧಣ್ಣ ಮೇಟಿ

05:18 PM Feb 27, 2022 | Team Udayavani |

ಪಣಜಿ: ಗೋವಾ ಕನ್ನಡಿಗರ ಬಹು ವರ್ಷಗಳ ಬೇಡಿಯಾದ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ 10 ಕೋಟಿ ರೂ ನೀಡುವುದಾಗಿ ಘೋಷಿಸಿದೆ. ಕನ್ನಡ ಭವನ ನಿರ್ಮಾಣಕ್ಕೆ ಜಾಗವನ್ನು ಸಹ ನೋಡಲಾಗುತ್ತಿದೆ. ಕನ್ನಡ ಭವನ ನಿರ್ಮಾಣಕ್ಕೆ ನಾನು ಕನ್ನಡ ಸಾಹಿತ್ಯ ಪರಿಷತ್ ಮತ್ತು ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಮತ್ತು ವಿವಧ ಕನ್ನಡ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕನ್ನಡ ಭವನ ನಿರ್ಮಾಣಕ್ಕೆ ಶೃಮಿಸುತ್ತೇನೆ. ಗೋವಾದಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಜನತೆ ಒಳಿತಿಗಾಗಿ ಹಗಲಿರುಳು ಶೃಮಿಸುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ಘಟಕದ ನೂತನ ಅಧ್ಯಕ್ಷ ಸಿದ್ಧಣ್ಣ ಮೇಟಿ ಹೇಳಿದರು.

Advertisement

ಗೋವಾದ ಬಿಚೋಲಿಂನಲ್ಲಿ ಭಾನುವಾರ ಆಯೋಜಿಸಿದ್ದ ಹೊರನಾಡ ಕನ್ನಡಿಗರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ನನ್ನನ್ನು ಕನ್ನಡ ಸಾಹಿತ್ಯ ಪರಿಷತ್ ಗೋವಾ ಘಟಕದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಾಡೋಜ ಡಾ. ಮಹೇಶ್ ಜೋಶಿಯವರನ್ನು ಈ ಮೂಲಕ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ಧಣ್ಣ ಮೇಟಿ ನುಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‍ನ ಗೋವಾ ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಾಡೋಜ ಮಹೇಶ್ ಜೋಷಿಯವರಿಗೆ ಧನ್ಯವಾದ ಸಲ್ಲಿಸುತ್ತೇವೆ. ಮುಂಬರುವ ದಿನಗಳಲ್ಲಿಯೂ ಗೋವಾ ಕನ್ನಡಿಗರಿಗೆ ಕರ್ನಾಟಕ ಸರ್ಕಾರದ ಮತ್ತು ಸಾಹಿತ್ಯ ಪರಿಷತ್‍ನ ಬೆಂಬಲ ಮುಂದುವರೆಯಲಿ ಎಂದು ಬಯಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಪ್ಸಾ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮಾತನಾಡಿ- ಸಿದ್ಧಣ್ಣ ಮೇಟಿ ಯವರಂತ ಉತ್ತಮ ವ್ಯಕ್ತಿಯನ್ನು ಸಾಹಿತ್ಯ ಪರಿಷತ್‍ಗೆ ಆಯ್ಕೆ ಮಾಡಿರುವುದರಿಂದ ಮುಂಬರುವ ದಿನಗಳಲ್ಲಿ ಸಾಹಿತ್ಯ ಪರಿಷತ್ ಕಾರ್ಯಕ್ರಮ ಉತ್ತಮವಾಗಿ ನಡೆಯಲಿದೆ ಎಂದರು.

Advertisement

ಈ ಸಂದರ್ಭದಲ್ಲಿ ಬಿಚೋಲಿ ಮಾಜಿ ನಗರಸಭಾ ಅಧ್ಯಕ್ಷ ಭಗವಾನ್ ಹರಮಲ್‍ಕರ್, ರಾಧಾಕೃಷ್ಣ ವಿದ್ಯಾಲಯದ ಎನ್‍ಸಿಸಿ ಅಧಿಕಾರಿ ರಾವುಪ್ ಖಾನ್ ಪಠಾಣ್, ಕರ್ನಾಟಕ ಜಾಗೃತ ವೇದಿಕೆಯ ಅಧ್ಯಕ್ಷ ಮಹೇಶ್ ಬಾಬು ಸುರ್ವೆ ಮತ್ತಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Advertisement

Udayavani is now on Telegram. Click here to join our channel and stay updated with the latest news.

Next