Advertisement

ಸಿದ್ದೇಶ್ವರ್‌ಗೆ ಸೋಲು ಖಚಿತ: ಶಾಮನೂರು

12:30 AM Feb 26, 2019 | Team Udayavani |

ದಾವಣಗೆರೆ: ಸಂಸದ ಜಿ.ಎಂ.ಸಿದ್ದೇಶ್ವರ್‌ ಈ ಬಾರಿಯ ಲೋಕಸಭೆ ಚುನಾವಣೆಯೇ ಕೊನೆಯದ್ದು ಎಂಬುದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಹಾಗೂ ಸಿದ್ದೇಶ್ವರ್‌ ಇಬ್ಬರನ್ನೂ ಜನರೇ ಮನೆಗೆ ಕಳುಹಿಸಲಿದ್ದಾರೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 

Advertisement

ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರನ್ನು ಈ ಬಾರಿ ಮನೆಗೆ ಕಳುಹಿಸುತ್ತೇವೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಈಗಾಗಲೇ ಅವರ ಅಸಲಿ ಬಣ್ಣ ಜನರಿಗೆ ಗೊತ್ತಾಗಿದೆ. ಹಾಗಾಗಿ ಈ ಬಾರಿ ಅವರು ಮನೆಗೆ ಹೋಗಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next