Advertisement

ಸಿದ್ದು ಆಪ್ತರೇ ರಾಜೀನಾಮೆ ನೀಡಿದ್ದಾರೆ: ಸದಾನಂದಗೌಡ

07:26 AM Jul 08, 2019 | Lakshmi GovindaRaj |

ಬೆಂಗಳೂರು: ಬಿಜೆಪಿ ಆಪರೇಷನ್‌ ಕಮಲ ನಡೆಸುತ್ತಿಲ್ಲ. ಆ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಈ ಹಿಂದೆ ಕೇಳಿ ಬಂದಿದ್ದ ಹೆಸರುಗಳಿಗಿಂತ ರಾಜೀನಾಮೆ ನೀಡಿರುವ ಶಾಸಕರೇ ಭಿನ್ನವಾಗಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಕೆಲವರು ರಾಜೀನಾಮೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಅವರೇ ತಮ್ಮ ಆಪ್ತ ಶಾಸಕರನ್ನು ಕಳುಹಿಸಿಕೊಟ್ಟಿದ್ದಾರಾ ಎಂಬ ಪ್ರಶ್ನೆಗೆ ಸದಾನಂದಗೌಡರು “ಸ್ವಲ್ಪ ಡೌಟು’ ಎಂದು ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next