Advertisement
ಕಾವೇರಿ ನಿವಾಸದಲ್ಲಿ ವೇಣುಗೋಪಾಲ್ ಭೇಟಿ ಮಾಡಿದ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಕೆಡವಲು ತಮ್ಮ ಬೆಂಬಲಿಗರೇ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನವರೇ ಬಿಂಬಿಸುತ್ತಿರುವ ಬಗ್ಗೆ ಕೆ.ಸಿ.ವೇಣುಗೋಪಾಲ್ ಮುಂದೆ “ಗರಂ’ಆಗಿ ಮಾತನಾಡಿದರು. ಎಲ್ಲದಕ್ಕೂ ನಾನೇ ಕಾರಣ ಎಂಬುದು ಎಷ್ಟು ಸರಿ. ಸರ್ಕಾರದ ನೇತೃತ್ವ ವಹಿಸಿರುವವರು ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯಬೇಕಲ್ಲವೇ ಎಂದರು.
ಮತ್ತೂಂದೆಡೆ ಶನಿವಾರ ತಡರಾತ್ರಿ ಕುಮಾರಕೃಪ ಅತಿಥಿಗೃಹದಲ್ಲಿ ಭೇಟಿ ಮಾಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ, ಕಾಂಗ್ರೆಸ್ ನಾಯಕರಿಂದಲೇ ಗೊಂದಲ ಉಂಟಾಗುತ್ತಿದೆ. ಪಕ್ಷದ ಆಂತರಿಕ ಸಮಸ್ಯೆಗೂ ಸಮ್ಮಿಶ್ರ ಸರ್ಕಾರಕ್ಕೂ ಸಂಬಂಧ ಕಲ್ಪಿಸಲಾಗುತ್ತಿದೆ. ಸಾಲ ಮನ್ನಾದಂತಹ ಮಹತ್ವದ ತೀರ್ಮಾನ ಕೈಗೊಂಡರೂ ಬಂಡಾಯದ ಹೇಳಿಕೆ, ಗೊಂದಲಗಳಿಂದಾಗಿ ಅದು ಮರೆಯಾಗಿದೆ ಎಂದು ಅಸಮಾಧಾನ ತೋಡಿಕೊಂಡರು.
Related Articles
Advertisement
ಅತ್ತ ಕುಮಾರಸ್ವಾಮಿ ಹಾಗೂ ಹಾಗೂ ಇತ್ತ ಸಿದ್ದರಾಮಯ್ಯ ಅವರ ಮಾತುಗಳಿಂದ ಇಕ್ಕಟ್ಟಿಗೆ ಸಿಲುಕಿದಂತಾದ ವೇಣುಗೋಪಾಲ್, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಇಬ್ಬರಿಗೂ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.