Advertisement
ಮೈಸೂರು ಹೊರವಲಯದ ತಿ.ನರಸೀಪುರ ಮುಖ್ಯರಸ್ತೆ ಹಾಗೂ ಈ ಭಾಗದ ಪ್ರಭಾವಿ ಮಠವಿರುವ ಸುತ್ತೂರು ಗ್ರಾಮಕ್ಕೆ ತೆರಳುವ ಮಾರ್ಗದ ಜಂಕ್ಷನ್‌ನಲ್ಲಿರುವ ಪುಟ್ಟ ಗ್ರಾಮ ವರುಣ. ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭದಲ್ಲಿ ಮೈಸೂರು ತಾಲೂಕಿನ ಚಾಮುಂಡೇಶ್ವರಿ ಕ್ಷೇತ್ರ, ತಿ.ನರಸೀಪುರ ಹಾಗೂ ನಂಜನಗೂಡು ತಾಲೂಕಿಗೆ ಸೇರಿದ 122 ಹಳ್ಳಿಗಳನ್ನು ಸೇರಿಸಿ ವರುಣ ಕ್ಷೇತ್ರವನ್ನು ರಚಿಸಲಾಗಿದೆ. 2008ರಲ್ಲಿ ನಡೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ತ್ಯಜಿಸಿ, ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ 71,908 ಮತ ಪಡೆದು, ಬಿಜೆಪಿ ಅಭ್ಯರ್ಥಿಯಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಲ್.ರೇವಣಸಿದ್ದಯ್ಯ ವಿರುದಟಛಿ 18,837 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಮತಗಳನ್ನು ಪಡೆದು ಕೆಜೆಪಿ ಅಭ್ಯರ್ಥಿ ಕಾ.ಪು.ಸಿದ್ದಲಿಂಗಸ್ವಾಮಿ ವಿರುದ್ಧ 29,641 ಮತಗಳ ಅಂತರದಿಂದ ಜಯಗಳಿಸಿದರು. ಬಿಜೆಪಿ ಅಭ್ಯರ್ಥಿ ಎಸ್.ಡಿ.ಮಹೇಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಚೆಲುವರಾಜು ಠೇವಣಿ ಕಳೆದುಕೊಂಡರು. ವೀರಶೈವ-ಲಿಂಗಾಯತರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮತಗಳೂ ಹೆಚ್ಚಾಗಿವೆ. ನಂತರದ ಸ್ಥಾನದಲ್ಲಿ ಕುರುಬರು, ಒಕ್ಕಲಿಗರು, ಅಷ್ಟೇ ಸಂಖ್ಯೆಯಲ್ಲಿ ಇತರ ಹಿಂದುಳಿದ ವರ್ಗಗಳ ಜನರ ಮತಗಳಿವೆ.
Related Articles
Advertisement
ಯತೀಂದ್ರ ಡಾಕ್ಟರ್ ಸಿದ್ದರಾಮಯ್ಯನವರ ಹಿರಿಯ ಪುತ್ರ ರಾಕೇಶ್ ಅಕಾಲಿಕ ಮರಣದ ನಂತರ ಕುಟುಂಬದವರ ಒತ್ತಾಯದ ಮೇರೆಗೆ ತಂದೆಯ ಉತ್ತರಾಧಿಕಾರಿಯಾಗಿ ಒಂದೂವರೆ ವರ್ಷಗಳ ಹಿಂದೆ ಕ್ಷೇತ್ರಕ್ಕೆ ಕಾಲಿಟ್ಟ ಯತೀಂದ್ರ, ಇಡೀ ಕ್ಷೇತ್ರದ ಜವಾಬ್ದಾರಿ ಹೊತ್ತು ಕೆಲಸ-ಕಾರ್ಯಗಳನ್ನು ಮಾಡುವ ಮೂಲಕ ಹಳ್ಳಿಗರ ಬಾಯಲ್ಲಿ ಡಾಕ್ಟರ್ ಎಂದೇ ಜನಪ್ರಿಯರಾಗಿದ್ದಾರೆ. ಸಿದ್ದರಾಮಯ್ಯ ಪುತ್ರನಿಗೆ ರಾಜಕೀಯ ಅಧಿಕಾರ ಕಲ್ಪಿಸುವ ದೃಷ್ಟಿಯಿಂದ ಸುರಕ್ಷಿತವಾದ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟು, ತಾವು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ಮೈಸೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದ್ದು, ಹಿಂದೆಂದೂ ಆಗದಂತಹ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ.ಆದ್ದರಿಂದ ಮತದಾರರು ಅಭಿವೃದ್ಧಿ ನೋಡಿ ಕಾಂಗ್ರೆಸ್ ಪಕ್ಷವನ್ನು, ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ.– ಡಾ.ಯತೀಂದ್ರ, ಕಾಂಗ್ರೆಸ್ ಅಭ್ಯರ್ಥಿ
ಸಾಮಾನ್ಯ ಕಾರ್ಯಕರ್ತನಾದ ನನಗೆ ಬಿಜೆಪಿ ಟಿಕೆಟ್ ನೀಡಿದ್ದು, ಎಲ್ಲರ ಸಹಕಾರದಿಂದ ಪ್ರಚಾರ ಚೆನ್ನಾಗಿ ನಡೆದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕ್ಷೇತ್ರದಲ್ಲಿ ನನ್ನ ಪರ ಪ್ರಚಾರಕ್ಕೆ ಬರುತ್ತಿರುವುದು ನಮ್ಮ ಆತ್ಮಸ್ಥೆçರ್ಯವನ್ನು ವೃದಿಟಛಿಸಿದೆ.
– ತೋಟದಪ್ಪ ಬಸವರಾಜು, ಬಿಜೆಪಿ ಅಭ್ಯರ್ಥಿ ವಿದೇಶದಲ್ಲಿ ಅಧ್ಯಯನ ನಡೆಸಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶೇಷ ಪರಿಣಿತಿ ಪಡೆದು ಬಂದಿರುವ ನನಗೆ ಯುವ ಜನರನ್ನು ಸ್ವ ಉದ್ಯೋಗದಲ್ಲಿ ತೊಡಗಿಸಿ, ಸ್ವಾವಲಂಬಿಗಳನ್ನಾಗಿಸುವ ಮಹತ್ವಾಕಾಂಕ್ಷೆ ಇದೆ. ಕುಮಾರಸ್ವಾಮಿ ಸಿಎಂ ಆದರೆ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದರಿಂದ ಜನ ಜೆಡಿಎಸ್ ಬೆಂಬಲಿಸಲಿದ್ದಾರೆ.
– ಅಭಿಷೇಕ್ ಎಸ್.ಮಣೆಗಾರ್, ಜೆಡಿಎಸ್ ಅಭ್ಯರ್ಥಿ – ಗಿರೀಶ್ ಹುಣಸೂರು