ಹಾಗಾದರೆ ನಿಮ್ಮ ತಂದೆ ಕೂಡ ಪುಟಗೋಸಿ ಹುದ್ದೆಯಲ್ಲಿ ಇದ್ದದ್ದಾ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಶ್ನಿಸಿದ್ದಾರೆ.
Advertisement
ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರಶ್ನೆಗಳ ಮಳೆಗೆರೆದಿದ್ದಾರೆ.
Related Articles
Advertisement
ಸಮ್ಮಿಶ್ರ ಸರ್ಕಾರ ಉರುಳುವ ಹಂತಕ್ಕೆ ಹೋದಾಗಲೂ ಎಚ್.ಡಿ.ಕುಮಾರಸ್ವಾಮಿ ಅಮೇರಿಕಾಗೆ ಹೋಗಿ ಕೂತಿದ್ದು ಏಕೆ? ನಾನೇ ಫೋನ್ ಮಾಡಿ ಕುಮಾರಸ್ವಾಮಿ ಅವರೆ ಸರ್ಕಾರ ಬೀಳುವ ಹಂತಕ್ಕೆ ಹೋಗಿದೆ, ಭಾರತಕ್ಕೆ ಬನ್ನಿ ಎಂದು ಕರೆದರೆ ಬಂದ್ರಾ? ಸರ್ಕಾರ ಉಳಿಸಿಕೊಳ್ಳುವ ಮನಸು ಕುಮಾರಸ್ವಾಮಿಗೆ ಇರಲಿಲ್ಲ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವರ ಹುಟ್ಟುಹಬ್ಬದ ದಿನ ಕಡೇ ಬಾರಿ ನಾನು ಭೇಟಿಯಾಗಿದ್ದು. ಆಮೇಲೆ ಒಂದು ದಿನವೂ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿಲ್ಲ. ವೈಯಕ್ತಿಕವಾಗಿ ಒಮ್ಮೆಯಾದರೂ ಭೇಟಿಮಾಡಿದ್ದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ.
200೫ ರಲ್ಲಿ ಧರಂಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಕೈಜೋಡಿಸಿದ್ದು ಸನ್ಯಾಸತ್ವಕ್ಕಾಗಿಯೋ ಅಥವಾ ಅಧಿಕಾರಕ್ಕಾಗಿಯೋ? ಕುಮಾರಸ್ವಾಮಿ ಅವರ ಪಕ್ಷದ ಹೆಸರಲ್ಲಷ್ಟೇ ಜಾತ್ಯಾತೀತತೆ ಉಳಿದಿದೆ, ಅಧಿಕಾರ ಬೇಕಾದಾಗ ಕೋಮುವಾದಿ ಬಿಜೆಪಿ ಜೊತೆಗೂ ಹೊಂದಾಣಿಕೆ ಮಾಡಿಕೊಳ್ತಾರೆ.
ಯಡಿಯೂರಪ್ಪ ಬಿಜೆಪಿಯ ಮಾಜಿ ಮುಖ್ಯಮಂತ್ರಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ, ಗೃಹ ಸಚಿವ ಅಮಿತ್ ಶಾ ಕೂಡ ಅವರ ಪಕ್ಷದವರೆ, ರಾಜ್ಯದ ವಿರೋಧ ಪಕ್ಷದ ನಾಯಕನಾದ ನನ್ನ ಮಾತು ಕೇಳಿ ನರೇಂದ್ರ ಮೋದಿ ಸರ್ಕಾರ ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ ಮಾಡಿಸುತ್ತದಾ ? ಎಂದು ಟ್ವೀಟ್ ಗಾಲ ಮೂಲಕ ಪ್ರಶ್ನಿಸಿದ್ದಾರೆ.