Advertisement

Congress ರಾಹುಲ್‌ಗೆ ಪರಸ್ಪರ ದೂರು ನೀಡಿದ ಸಿದ್ದು, ಡಿಕೆಶಿ?!

12:01 AM Jun 30, 2024 | Team Udayavani |

ಬೆಂಗಳೂರು: ಕಳೆದ ಮೂರು ದಿನಗಳಿಂದ ದಿಲ್ಲಿಯಲ್ಲಿ ಬೀಡುಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

Advertisement

ಸಚಿವರಾದ ಡಾ| ಜಿ. ಪರಮೇಶ್ವರ್‌, ಕೆ.ಜೆ. ಜಾರ್ಜ್‌, ಡಾ| ಎಚ್‌.ಸಿ. ಮಹದೇವಪ್ಪ. ದಿಲ್ಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ದರ್ಶನ್‌ ಧ್ರುವನಾರಾಯಣ, ಗಣೇಶ್‌ ಮಹದೇವಪ್ರಸಾದ್‌ ಮೊದಲಾದವ ರೊಂದಿಗೆ ರಾಹುಲ್‌ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ ಅವರು, ವಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು.

ಈ ಮಧ್ಯೆ ಡಿಸಿಎಂ ಡಿಕೆಶಿ ದಿಲ್ಲಿ
ತಲುಪುವಷ್ಟರಲ್ಲಿಯೇ ರಾಹುಲ್‌ ಅವರನ್ನು ಸಿಎಂ ಭೇಟಿಯಾಗಿದ್ದು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಆಸ್ಪದ ನೀಡಿದೆ. ಸಿದ್ದರಾಮಯ್ಯ ಪ್ರತ್ಯೇಕವಾಗಿ ರಾಹುಲ್‌ ಜತೆ ಕೆಲ ನಿಮಿಷ ಮಾತುಕತೆ ನಡೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ದೂರು?
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಬಗ್ಗೆ ಸಿಎಂ ಅವರು ಕೆಲವೊಂದು ದೂರುಗಳನ್ನು ಸಲ್ಲಿಸಿರುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಲು ಪಕ್ಷ ಸಂಘಟನೆ ಕೊರತೆಯೇ ಕಾರಣ, ಹೀಗಾಗಿ ಕೆಪಿಸಿಸಿಗೆ ಪೂರ್ಣ ಪ್ರಮಾಣದಲ್ಲಿ ಅಧ್ಯಕ್ಷ ಸ್ಥಾನ ನಿರ್ವಹಿಸುವ ಸೂಕ್ತ ವ್ಯಕ್ತಿ ಅಗತ್ಯವಿದೆ, ಜತೆಗೆ ಮುಂಬರುವ ಬಿಬಿಎಂಪಿ, ಜಿ.ಪಂ., ತಾ.ಪಂ. ಚುನಾವಣೆಗೆ ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯವೆಂದು ಪ್ರತಿಪಾದಿಸಿದ್ದಾರೆಂದು ತಿಳಿದುಬಂದಿದೆ.

Advertisement

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾದರೆ ಡಿಸಿಎಂ ಡಿಕೆಶಿ ದಿಲ್ಲಿಯಲ್ಲಿಯೇ ಉಳಿದು ಪ್ರತಿಯಾಗಿ ಸಿಎಂ ವಿರುದ್ಧವೂ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ಸಿದ್ದು ವಿರುದ್ಧ ಡಿ.ಕೆ. ಶಿವಕುಮಾರ್‌ ದೂರು?
ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳು ಸೃಷ್ಟಿಯಾಗಬೇಕೆಂಬ ಬೇಡಿಕೆ ಹಿಂದೆ ಸಿಎಂ ಅವರ ಕೈವಾಡವಿದ್ದು ತಮ್ಮ ಆಪ್ತ ಸಚಿವರ ಮೂಲಕ ಪದೇ ಪದೆ ಹೇಳಿಕೆ ಕೊಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗಿನ ಹಿಂದೆಯೂ ಇದೇ ತಂಡ ಕೈವಾಡವಿದೆ. ಹಲವು ಸಲ ಎಚ್ಚರಿಕೆ ನೀಡಿದರೂ ಕೆಲವು ಸಚಿವರು, ಶಾಸಕರು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೇಳಿಕೆ ನೀಡುತ್ತಲೇ ಇದ್ದಾರೆ, ಇದಕ್ಕೆಲ್ಲ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೆ.ಸಿ. ವೇಣುಗೋಪಾಲ್‌ಗೆ ಡಿಕೆಶಿ ಮನವರಿಕೆ ಮಾಡಿದ್ದಾರೆನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next