Advertisement
ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ .ಉತ್ತರಾಖಂಡ್ ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ .4 ರಾಜ್ಯಗಳ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸುದ್ದಿಗಾರರಿಗೆ ತಿಳಿಸಿದರು.
ಪಂಜಾಬ್ ನಲ್ಲಿ ಒಬ್ಬ ಸಿದ್ದು, ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ಪಂಜಾಬ್ ಸಿದ್ದು ಇಂದ ಅಲ್ಲಿ ಕಾಂಗ್ರೆಸ್ ನಾಶವಾಗಿದೆ .100 ವರ್ಷಗಳ ಕಾಂಗ್ರೆಸ್ ಗೆ ನಾಯಕತ್ವ ಕೊರತೆ, ಒಂದೇ ಕುಟುಂಬದ ಮೇಲೆ ಅವಲಂಬಿತ ಪಕ್ಷ ನಾಶವಾಗಲಿದೆ ಎಂದು ಹೇಳಿದರು. ಬಿಜೆಪಿ ಒಂದೇ ಕುಟುಂಬದಕ್ಕೇ ಸೀಮಿತವಾದ ಪಕ್ಷ ಅಲ್ಲ. ಪ್ರತಿಯೊಂದು ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಅಭಿಪ್ರಾಯಪಟ್ಟರು.