Advertisement

ಮೈತ್ರಿ ಸರ್ಕಾರದಲ್ಲಿ ಸಿದ್ದು ಸಿಎಂ ಆಗಬೇಕಿತ್ತು

11:39 PM Oct 02, 2019 | Team Udayavani |

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗನಾಗಿದ್ದೆ. ಈಗಲೂ ನಾನು ಅವರ ಬೆಂಬಲಿಗ. ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ, ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ಅಗಿದ್ದೆ ಬೇರೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಸುದ್ದಿಗಾರರ ಜೊತೆ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣ ಇದ್ದುದರಿಂದ ರಾಜೀನಾಮೆ ಕೊಡಬೇಕಾಯಿತು. 37 ಸ್ಥಾನ ಪಡೆದಿದ್ದ ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟು ಕಾಂಗ್ರೆಸ್‌ ತಪ್ಪು ಮಾಡಿತು. ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ದುರುದ್ದೇಶದಿಂದ ನಮ್ಮನ್ನು ಅನರ್ಹಗೊಳಿಸಿದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next