Advertisement

ಹೈಕೋರ್ಟ್‌ ಮೆಟ್ಟಿಲೇರಿದ ಸಿದ್ದು

10:39 PM Sep 20, 2019 | Lakshmi GovindaRaju |

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಮೈಸೂರಿನ ವಿಜಯನಗರ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಸ್ವಾಧೀನಪಡಿಸಿಕೊಂಡಿದ್ದ 535 ಎಕರೆ ಜಮೀನಿನಲ್ಲಿ 30 ಗುಂಟೆ ಜಮೀನು ಡಿನೋಟಿಫೈ ಮಾಡಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ಆರೋಪ ಎದುರಿಸುತ್ತಿದ್ದಾರೆ.

ಡಿನೋಟಿಫೈ ಮಾಡಲಾದ 30 ಗುಂಟೆ ಜಮೀನು ಪೈಕಿ 10 ಗುಂಟೆ ಖರೀದಿಸಿ ಸಿದ್ದರಾಮಯ್ಯ ಅಲ್ಲಿ ಮನೆ ನಿರ್ಮಾಣ ಮಾಡಿ, ಬಳಿಕ ಆ ಮನೆಯನ್ನು ಮಾರಾಟ ಮಾಡಿದ್ದಾರೆ. ಈ ರೀತಿ ನೋಟಿಫೈ ಮಾಡಿದ ಜಾಗವನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗಂಗರಾಜು ಎಂಬುವರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ್ದ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ದೂರುದಾರ ಗಂಗರಾಜು ಕೋರ್ಟ್‌ ಮೊರೆ ಹೋಗಿದ್ದರು. ಬಿ ರಿಪೋರ್ಟ್‌ ರದ್ದುಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಈಗ ಪ್ರಕರಣ ವಿಚಾರಣೆ ಹಾಗೂ ಸಮನ್ಸ್‌ ರದ್ದು ಕೋರಿ ಸಿದ್ದರಾಮಯ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್‌: ಎಚ್‌ಡಿಕೆ ಹೈಕೋರ್ಟ್‌ ಮೊರೆ
ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್‌ ಆರೋಪ ಪ್ರಕರ ಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಬೆಂಗಳೂರಿನ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ವ್ಯಾಪ್ತಿಯ 3.34 ಎಕರೆ ಜಮೀನು ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತ್ತಿದೆ. ಈ ಸಂಬಂಧ ಅ.4ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಇದೀಗ ಪ್ರಕರಣ ರದ್ದುಕೋರಿ ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಿಶೇಷ ನ್ಯಾಯಾಲಯದ ವಿಚಾರಣೆ ಹಾಗೂ ಸಮನ್ಸ್‌ ರದ್ದು ಕೋರಿ ಸಲ್ಲಿಸಲಾದ ಈ ಅರ್ಜಿಯಲ್ಲಿ ಲೋಕಾಯುಕ್ತ ಪೊಲೀಸರು ಹಾಗೂ ಖಾಸಗಿ ದೂರುದಾರ ಎಂ.ಎಸ್‌. ಮಹದೇವಸ್ವಾಮಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಈ ಅರ್ಜಿಯು ನ್ಯಾ. ಪಿ.ಎಸ್‌. ದಿನೇಶ್‌ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೆ.23ಕ್ಕೆ ವಿಚಾರಣೆಗೆ ನಿಗದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next