ಶಿವಮೊಗ್ಗ: ಬಿಜೆಪಿ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಸಂಕಷ್ಟ ಎದುರಾಗಲ್ಲ. ಉಪ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲಿದ್ದೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಮಿಷದವರೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ. ಜೆಡಿಎಸ್‌ನವರಿಗೆ ಉಪ ಚುನಾವಣೆಯಲ್ಲಿ ನಿಲ್ಲಲು ಜನರೇ ಸಿಕ್ಕಿಲ್ಲ. ಹೀಗಾಗಿ, ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ ಎಂದು ಹೇಳಿದರು.
ಸಂಕಟ ಬಂದಾಗ ಬಿಜೆಪಿ ನೆನಪು: ಸಿದ್ದರಾಮಯ್ಯ ಅವರಿಗೆ ಸಂಕಟ ಆರಂಭವಾದಾಗ ಬಿಜೆಪಿಯ ನೆನಪಾಗುತ್ತದೆ. ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯ ಮಂತ್ರಿಯಾಗಿದ್ದರು. ಆದರೆ, ಏಕೆ ಅಧಿಕಾರ ಕಳೆದುಕೊಂಡರು ಎಂದು ಪ್ರಶ್ನಿಸಿದರು. ಬಿಜೆಪಿ ಸುಭದ್ರವಾಗಿ ರಾಜ್ಯ ಸರ್ಕಾರ ನಡೆಸುತ್ತಿದೆ. ಕೆಲವು ಶಾಸಕರನ್ನು ಅನರ್ಹರ ನ್ನಾಗಿಸಲು ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್ ಕುತಂತ್ರ ರಾಜಕಾರಣ ಮಾಡಿದ್ದರು. ಸುಪ್ರೀಂಕೋರ್ಟ್ ತೀರ್ಪು ತುಂಬಾ ಚೆನ್ನಾಗಿ ಬಂದಿದೆ. ಅನರ್ಹ ಶಾಸಕರು ಚುನಾವಣೆಗೆ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟಲ್ಲ ಎಂದು ಸಿದ್ದರಾಮಯ್ಯ ಹಾಗೂ ದೇವೇಗೌಡರು ಹೇಳಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಎರಡಂಕಿ ದಾಟಲಿಲ್ಲ. ಬದಲಿಗೆ ತಲಾ ಒಂದು ಕ್ಷೇತ್ರದಲ್ಲಿ ಗೆದ್ದರು ಅಷ್ಟೇ. ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದೂ ಸ್ಥಾನ ಗೆಲ್ಲಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳುವುದೆಲ್ಲಾ ಸುಳ್ಳು. ಮೋದಿ ಯಾವುದೇ ಕಾರಣಕ್ಕೂ ಪ್ರಧಾನಿಯಾ ಗಲ್ಲ ಎಂದಿದ್ದರು. ಆದರೆ ಮೋದಿ ಇಡೀ ವಿಶ್ವವೇ ನೋಡುವಂತಹ ಪ್ರಧಾನಿಯಾಗಿದ್ದಾರೆ. ಸಿದ್ದ ರಾಮಯ್ಯ ಹೇಳುವುದೆಲ್ಲಾ ಸುಳ್ಳಾಗುತ್ತದೆ. ಬಿಜೆಪಿ ಹೇಳುವುದೆಲ್ಲಾ ನಿಜವಾಗುತ್ತದೆ. ಸಿದ್ದರಾಮಯ್ಯನವರು ಸರ್ವಾಧಿ ಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಕಾಂಗ್ರೆಸ್‌ನಲ್ಲಿ ಏನು ಬೇಕಾದರೂ ನಡೆಯುತ್ತಿದೆ ಎಂದು ವಾಗ್ಧಾಳಿ ನಡೆಸಿದರು.
ಲಕ್ಷ್ಮೀ ಹೆಬ್ಟಾಳಕರ ಅವರು ಬಿಜೆಪಿಗೆ ಬರುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಬಿಜೆಪಿ ನಾಯಕರನ್ನು ಭೇಟಿ ಮಾಡಿದಾಕ್ಷಣ ಬಿಜೆಪಿ ಸೇರುತ್ತಾರೆಂಬುದು ಸುಳ್ಳು. ಮಂತ್ರಿಗಳನ್ನು ಭೇಟಿ ಮಾಡಿದಾಕ್ಷಣ “ಆಪರೇಷನ್ ಕಮಲ’ ಆಗುತ್ತಾರೆಂದು ತಿಳಿಯುವುದು ತಪ್ಪು.
-ಕೆ.ಎಸ್.ಈಶ್ವರಪ್ಪ, ಸಚಿವ