Advertisement

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ, ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ : ಸಿದ್ದು ಸವದಿ

05:51 PM May 24, 2022 | Team Udayavani |

ರಬಕವಿ-ಬನಹಟ್ಟಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಅಳಿಸಿ ಹೋಗಲಿದೆ. ಬಿಜೆಪಿ ದೇಶಕ್ಕೆ ಅನಿವಾರ್ಯವಾಗಿದೆ. 2023 ವಿಧಾನ ಸಭೆಯ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕಿದೆ. ಆದ್ದರಿಂದ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಾದ ಹನಮಂತ ನಿರಾಣಿ ಮತ್ತು ಅರುಣ ಶಹಾಪುರ ಗೆಲ್ಲಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

Advertisement

ಮಂಗಳವಾರ ಅವರು ಸ್ಥಳೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನಡೆದ ವಿಧಾನ ಪರಿಷತ್ ಪೂರ್ವಭಾವಿ ಸಭೆಯ ಮತ್ತು ನಗರ ಮತ್ತು ಗ್ರಾಮೀಣ ಮಂಡಳದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿ ಬಿಜೆಪಿ ಪಕ್ಷದ ಫಲಾನುಭವಿಯಾಗಿದ್ದಾನೆ. ಆದ್ದರಿಂದ ಪ್ರಧಾನಿ ಮೋದಿ ಮತ್ತು ರಾಜ್ಯ ಬಿಜೆಪಿ ಸರ್ಕಾರ ನೀಡಿದ ಕೊಡಗೆಗಳನ್ನು ಮತದಾರರಿಗೆ ತಿಳಿ ಹೇಳುವ ಕಾರ್ಯವಾಗಬೇಕು. ಮುಂದಿನ ವರ್ಷ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಆಡಳಿತದ ಚುಕ್ಕಾಣೆಯನ್ನು ಹಿಡಿಯಲಿದೆ. ದೇಶ ಧರ್ಮ, ಸಂಸ್ಕೃತಿಯನ್ನು ಕಾಪಾಡಲು ಬಿಜೆಪಿ ಅಗತ್ಯ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತನಗೌಡ ಪಾಟೀಲ ಮಾತನಾಡಿ, ಬಿಜೆಪಿ ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಪಕ್ಷದ ಆದೇಶಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಬೇಕು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮ್ಮ ಪಕ್ಷದ ಅಭ್ಯರ್ಥಿಗಳ ಗೆಲವು ನಿಶ್ಚಿತವಾಗಿದೆ. ಆದರೆ ಗೆಲುವಿನ ಅಂತರ ಹೆಚ್ಚಾಗಬೇಕು. ಪ್ರತಿಯೊಂದು ಗ್ರಾಮ ಮತ್ತು ನಗರ ಪ್ರದೇಶದ ಮತದಾರರನ್ನು ಕಾರ್ಯಕರ್ತರು ತಲುಪಿ ಅವರು ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.

ಇದನ್ನೂ ಓದಿ : ಸುಮಲತಾ-ಪ್ರತಾಪಸಿಂಹ ನಡುವೆ ಮತ್ತೆ ಶೀತಲ ಸಮರ?

Advertisement

ಕಾರ್ಯಕ್ರಮದಲ್ಲಿ ಬಿಜೆಪಿ ಪದಾಧಿಕಾರಿಗಳಾದ ಶ್ರೀಶೈಲಗೌಡ ಪಾಟೀಲ, ರಾಜು ನಾಯ್ಕರ್, ಸುರೇಶ ಅಕ್ಕಿವಾಟ ಮಾತನಾಡಿದರು.

ವೇದಿಕೆಯ ಮೇಲೆ ಬಿಜೆಪಿ ಉಪಾಧ್ಯಕ್ಷ ರಾಜು ಅಂಬಲಿ, ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಡಿ.ಆರ್.ಪಾಟೀಲ, ಬಸಪ್ರಭು ಹಟ್ಟಿ, ಮನೋಹರ ಶಿರೋಳ, ಸಂಜಯ ತೆಗ್ಗಿ, ಮಹಾಲಿಂಗ ಕೋಳಿಗುಡ್ಡ, ಮಹಾವೀರ ಕೊಕಟನೂರ, ಪುಂಡಲೀಕ ಪಾಲಭಾವಿ, ಸವಿತಾ ಹೊಸೂರ, ಪವಿತ್ರಾ ತುಕ್ಕನ್ನವರ ಸೇರಿದಂತೆ ಅನೇಕರು ಇದ್ದರು.
ಶಂಕರ ಹುನ್ನೂರ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಸನೀತಾ ನಂದಗೊಂಡ, ರತ್ನಾ ಕೊಳಕಿ, ಆನಂದ ಕಂಪು, ಲಕ್ಕಪ್ಪ ಪಾಟೀಲ. ಮಹಾದೇವ ಕೋಟ್ಯಾಳ, ದುಂಡಯ್ಯ ಕಾಡದೇವರ, ವಿದ್ಯಾಧರ ಸವದಿ, ಯುನಿಸ್ ಚಾಗಲಾ, ಅಶೋಕ ಮೋಟಗಿ ಸೇರಿದಂತೆ ತೇರದಾಳ ಮತಕ್ಷೇತ್ರದ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next