Advertisement

ಜೈಲಿನಲ್ಲಿ ಕೈದಿಗಳ ಹೊಡೆದಾಟ: ಸಿಧು ಮೂಸೆ ವಾಲಾ ಪ್ರಕರಣದ 2 ಆರೋಪಿಗಳು ಮೃತ್ಯು

07:44 PM Feb 26, 2023 | Team Udayavani |

ಚಂಡೀಗಢ: ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿರುವ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಹೊಡೆದಾಟದಲ್ಲಿ ಸಿಧು ಮೂಸೆ ವಾಲಾ ಹತ್ಯೆಯ ಇಬ್ಬರು ಆರೋಪಿಗಳು ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

Advertisement

ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಬುಧಲಾನಾದ ಮನಮೋಹನ್ ಸಿಂಗ್ ಅಲಿಯಾಸ್ ಮೊಹ್ನಾ ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ.

ಘಟನೆ ಕುರಿತು ಹೇಳಿಕೆ ನೀಡಿದ ಎಸ್‌ಎಸ್‌ಪಿ ಗುರ್ಮೀತ್ ಸಿಂಗ್ ಚೌಹಾಣ್ ಮೂವರು ಆರೋಪಿಗಳ ನಡುವೆ ಮಾರಾಮಾರಿ ನಡೆದಿದೆ ಈ ವೇಳೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಇನ್ನೋರ್ವ ಕೈದಿ ಬಟಿಂಡಾದ ಕೇಶವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ.

ಗಾಯಕ ಸಿಧು ಮೂಸೆವಾಲ ಅವರನ್ನು ಮೇ 29, 2022 ರಂದು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಕೊಲ್ಲಲಾಗಿತ್ತು, ಆ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next