Advertisement

ಗಾಯಕ ಸಿಧು ಮೂಸೆವಾಲಾ ಹತ್ಯೆ : ಡೆಹ್ರಾಡೂನ್‌ ನಲ್ಲಿ ಶಂಕಿತ ವಶಕ್ಕೆ

05:28 PM May 30, 2022 | Team Udayavani |

ನವದೆಹಲಿ: ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದರಲ್ಲಿ, ಉತ್ತರಾಖಂಡ ಮತ್ತು ಪಂಜಾಬ್ ಪೊಲೀಸರು ಡೆಹ್ರಾಡೂನ್‌ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಹೇಳಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.

Advertisement

ಉತ್ತರಾಖಂಡ ಎಸ್‌ಟಿಎಫ್ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ಒಬ್ಬನನ್ನ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದಲ್ಲಿ ಬಂಧನ ಸಾಧ್ಯತೆಯಿದೆ, ಎಂದು ಮೂಲಗಳು ತಿಳಿಸಿವೆ.

ಪಂಜಾಬ್ ಸರ್ಕಾರವು ಸಿಧು ಮೂಸೆ ವಾಲಾ ಅವರ ಭದ್ರತೆಯನ್ನು ಮೊಟಕುಗೊಳಿಸಿದ 24 ಗಂಟೆಗಳ ನಂತರ, ಭಾನುವಾರ ಹಾಡ ಹಗಲೇ ಮಾನ್ಸಾದ ಅವರ ಪೂರ್ವಜರ ಹಳ್ಳಿಯ ಸಮೀಪ ದುಷ್ಕರ್ಮಿಗಳು 29ರ ಹರೆಯದ ಸಿಧು ಮೂಸೆವಾಲಾ ಎಂದು ಖ್ಯಾತಿ ಪಡೆದಿರುವ ಗಾಯಕ, ಕಾಂಗ್ರೆಸ್ ನಾಯಕ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಾಲಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತನಿಖೆಗಾಗಿ ನ್ಯಾಯಾಂಗ ಆಯೋಗವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಈ ಘೋರ ಅಪರಾಧದ ಅಪರಾಧಿಗಳನ್ನು ಕಂಬಿ ಹಿಂದೆ ಕಳುಹಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next