Advertisement

ಸಿಧು ಮೂಸೆವಾಲಾ ಕುಟುಂಬ ಸದಸ್ಯರನ್ನು ಭೇಟಿಯಾದ ಅಮಿತ್ ಶಾ

08:13 PM Jun 04, 2022 | Team Udayavani |

ಚಂಡೀಗಢ: ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್‌ ಮುಖಂಡ ಸಿಧು ಮೂಸೆವಾಲಾ ಅವರ ಹೆತ್ತವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಚಂಡೀಗಢದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Advertisement

ಈ ವೇಳೆ, ಮೂಸೆವಾಲಾ ಅವರ ಹತ್ಯೆಯಾಗಿ ವಾರ ಕಳೆದಿದ್ದರೂ ಈವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲವೆಂದು ಮೂಸೆವಾಲಾ ಕುಟುಂಬದ ಸದಸ್ಯರು ಶಾ ಅವರಲ್ಲಿ ಹೇಳಿದ್ದು, ಇದಕ್ಕೆ ಸ್ಪಂದಿಸಿದ ಶಾ, ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಪಂಜಾಬ್‌ ಸರ್ಕಾರಕ್ಕೆ ನಿರ್ದೇಶನ ನೀಡುವುದಾಗಿ ವಾಗ್ಧಾನ ಮಾಡಿದ್ದಾರೆ.

ಇದನ್ನೂ ಓದಿ:ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 12 ಚಕ್ರದ ಲಾರಿ : ವಾಹನ ಸವಾರರ ಪರದಾಟ

ಶುಕ್ರವಾರ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಸಿಂಗ್‌ ಮಾನ್‌ ಅವರು ಗಾಯಕನ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next