ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ನಿಗದಿತವಾಗಿರುವ ಹೈಕೋರ್ಟ್ ವಿಶೇಷ ನ್ಯಾಯಪೀಠದ ನ್ಯಾ| ಎಂ. ನಾಗಪ್ರಸನ್ನ ಅವರು ಹೈಕೋರ್ಟ್ ಧಾರವಾಡ ಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆಸಿದರು.
Advertisement
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೇ ಸರಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು. ಅರ್ಜಿದಾರರ ಪರ ಶತಾಭಿಷ್ ಶಿವಣ್ಣ ವಾದ ಮಂಡಿಸಿದರು.