Advertisement

3ರಂದು ತಾಲೂಕು ಕಚೇರಿಗೆ ಮುತ್ತಿಗೆ

11:38 AM Dec 01, 2019 | Suhan S |

ಮುಳಬಾಗಿಲು: ತಾಲೂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳರಿಯಲ್‌ ಎಸ್ಟೇಟ್‌ ಉದ್ದಿಮೆಗಳಿಗೆ ಪರ ಭಾರೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿ.3ರಂದು ಕುರಿಗಳ ಸಮೇತ ತಾಲೂಕು ಕಚೇರಿ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ,ತಾಲೂಕು ಕಚೇರಿಯಲ್ಲಿ ರವಿನ್ಯೂ, ಸರ್ವೆ,ಉಪನೋಂದಣಾಧಿಕಾರಿಗಳ ಕಾರ್ಯವೈಖರಿಯಿಂದ ಅಕ್ರಮ ಸಾಗುವಳಿ ಚೀಟಿ ದಂಧೆನಡೆಯುತ್ತಿದೆ. ಅದಕ್ಕೆ ಪೂರಕವಾಗಿ ರಾತ್ರೋರಾತ್ರಿ ನಕಲಿ ದಾಖಲೆ ಸೃಷ್ಟಿ ಮಾಡಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸರ್ಕಾರಿ ಗೋಮಾಳ ಜಮೀನನ್ನು ರಿಯಲ್‌ ಎಸ್ಟೇಟ್‌ ಉದ್ದಿಮೆದಾರರಿಗೆ ಪರಭಾರೆ ಮಾಡುತ್ತಿದ್ದಾರೆ ಎಂದು ದೂರಿದರು.

ತಾಲೂಕು ಅಧ್ಯಕ್ಷ ಫಾರುಕ್‌ಪಾಷಮಾತನಾಡಿ, ಅಕ್ರಮ ಸಾಗುವಳಿ ಚೀಟಿ ದಂಧೆಯಿಂದ ನಲ್ಲೂರು, ಬೈರಕೂರು, ತಾಯಲೂರು, ಆವಣಿ ಹೋಬಳಿಗಳಲ್ಲಿ ರವಿನ್ಯೂ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ75ರ ಹನುಮನಹಳ್ಳಿ ಗೇಟ್‌ನಿಂದ ನಂಗಲಿಗಡಿ ಭಾಗದವರೆಗೆ ಬಡವರ ಹೆಸರಿನಲ್ಲಿ ಶ್ರೀಮಂತರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದ್ದಾರೆ. ಕಂದಾಯಹಾಗೂ ಸರ್ವೆ ಮತ್ತು ಉಪನೋಂದಣಾಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next