Advertisement
ಬ್ರಿಡ್ಜ್ ನಿರ್ಮಾಣಕ್ಕೆ ಲಿಂಗನಮಕ್ಕಿ ಜಲಾಶಯದ ನೀರು ತೊಡಕಾಗುತ್ತಿದೆ ಎಂದು ಹೇಳಲಾಗಿತ್ತು. ಈಗ ಎಲ್ಲ ತೊಡಕುಗಳನ್ನು ದಾಟಿ ಸೇತುವೆಯ ಪ್ರಮುಖ ಕಾಮಗಾರಿಯಾದ ಪೈಲ್ ಕ್ಯಾಪ್ ಅಳವಡಿಕೆಯನ್ನು ಪೂರ್ಣಗೊಳಿಸಲಾಗಿದೆ. ಇದರಿಂದ ಸೇತುವೆ ನಿರ್ಮಾಣಕ್ಕೆ ಇನ್ಮುಂದೆ ಯಾವುದೇ ಅಡೆತಡೆ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
Related Articles
Advertisement
45 ದಿನದಲ್ಲೇ ಪೂರ್ಣ: ಯಾವುದೇ ಸೇತುವೆಗೆ ಪೈಲ್ ಕ್ಯಾಪ್ ಹಾಕುವುದು ಪ್ರಮುಖ ಘಟ್ಟ. ಪೈಲ್ ಕ್ಯಾಪ್ ಹಾಕಿದ ನಂತರ ಪಿಲ್ಲರ್‌ಗಳನ್ನು ನಿರ್ಮಾಣ ಮಾಡಲಾಗು ತ್ತದೆ. ನೂತನ ಮಾದರಿಯ ಸಿಗಂದೂರು ಸೇತುವೆಗೆ 19 ಪೈಲ್ ಕ್ಯಾಪ್‌ಗ್ಳ ಅವಶ್ಯಕತೆ ಇತ್ತು. ಎರಡು ವರ್ಷದಲ್ಲಿ 5 ಕ್ಯಾಪ್ ಹಾಕಲು ಮಾತ್ರ ಸಾಧ್ಯವಾಗಿತ್ತು. 2021ರಲ್ಲಿ ಕೆಪಿಸಿ ತಾಂತ್ರಿಕ ಕಾರಣಗಳಿಂದ ಜಲಾಶಯದಲ್ಲಿ ಹೆಚ್ಚಿನ ನೀರನ್ನು ಉಳಿಸಿತ್ತು. ಇದರಿಂದ ಕಾಮಗಾರಿಗೆ ನಿರೀಕ್ಷಿತ ವೇಗ ಸಿಕ್ಕಿರಲಿಲ್ಲ. ಸೇತುವೆ ನಿರ್ಮಾಣಕ್ಕೆ 2023ರ ಮೇ ವರೆಗೂ ಸಮಯ ನೀಡಲಾಗಿದ್ದು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವುದು ಅನುಮಾನವಾಗಿತ್ತು. ಇದನ್ನು ಸವಾಲಾಗಿ ಪರಿಗಣಿಸಿದ ಹೆದ್ದಾರಿ ಪ್ರಾಧಿಕಾರ ಅತ್ಯಾಧುನಿಕ ಉಪಕರಣಗಳನ್ನು ಬಳಸಿ ಕೇವಲ 45 ದಿನದಲ್ಲಿ ಪೈಲ್ ಕ್ಯಾಪ್ ಕಾಮಗಾರಿ ಪೂರ್ಣಗೊಳಿಸಿದೆ. ನೀರು ಕಡಿಮೆ ಮಾಡಿಕೊಟ್ಟರೆ 120 ದಿನದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದಿದ್ದ ಎಂಜಿನಿಯರ್‌ಗಳು ದಾಖಲೆ ಸಮಯದಲ್ಲಿ ಮುಕ್ತಾಯಗೊಳಿಸಿರುವುದು ಸ್ಥಳೀಯರಲ್ಲಿ ಸಂತಸ ತಂದಿದೆ. 300 ಜನ ಸಿಬ್ಬಂದಿ ದಿನದ 24 ಗಂಟೆಯೂ ಕೆಲಸ ಮಾಡಿದ್ದಾರೆ. ಮುಂಗಾರು ಪೂರ್ವ ಮಳೆ ಇದ್ದಾಗಲೂ ಕಾಮಗಾರಿ ನಿಲ್ಲಿಸಿಲ್ಲ. ಮೇ 10ಕ್ಕೆ ಆರಂಭವಾದ ಕೆಲಸ ಜೂ.20ಕ್ಕೆ ಪೂರ್ಣಗೊಂಡಿದೆ. 423 ಕೋಟಿ ವೆಚ್ಚದ 2125 ಮೀಟರ್ ಉದ್ದದ ಈ ಸೇತುವೆ ಇನ್ನು ಒಂದೂವರೆ ವರ್ಷದಲ್ಲಿ ಸೇವೆಗೆ ಮುಕ್ತವಾಗಲಿದೆ.
ಎರಡು ವರ್ಷದಿಂದ 5 ಪೈಲ್ ಕ್ಯಾಪ್ ಹಾಕಲು ಸಾಧ್ಯವಾಗಿರಲಿಲ್ಲ. 2020-21ರಲ್ಲೂ ನೀರು ಹೆಚ್ಚು ಸಂಗ್ರಹ ಇದ್ದ ಕಾರಣ ಕಾಮಗಾರಿಗೆ ತೊಡಕಾಗಿತ್ತು. ಮೇ ತಿಂಗಳಲ್ಲಿ ನೀರಿನ ಮಟ್ಟ ಕುಸಿದಿದ್ದರಿಂದ 120 ದಿನದಲ್ಲಿ ಮುಗಿಸಬೇಕಿದ್ದ ಕಾಮಗಾರಿಯನ್ನು 45 ದಿನದಲ್ಲೇ ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ ಎಂಜಿನಿಯರ್, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಗಿದೆ. ● ಪೀರ್ ಪಾಶ, ಸಿಗಂದೂರು ಸೇತುವೆ ಕಾಮಗಾರಿ ಉಸ್ತುವಾರಿ ಎಂಜಿನಿಯರ್
-ಶರತ್ ಭದ್ರಾವತಿ