Advertisement

ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಹಿ ಸಂಗ್ರಹ ಚಳವಳಿ

01:13 PM Dec 11, 2021 | Team Udayavani |

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗೀಕರಣ ಮಾಡುತ್ತಿವೆ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟೆ ದೂರಿದರು.

Advertisement

ನಗರದ ಕನ್ನಡ ಭವನದಲ್ಲಿ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಸಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳನ್ನು ದುರ್ಬಲಗೊಳಿಸುವ ಮೂಲಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಇಲ್ಲದಂತೆ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಬರುವ ಮಕ್ಕಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಒಳಪಡಿಸಲಾಗುತ್ತಿದೆ. ಈ ಮೂಲಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಲ್ಲದಂತೆ ಮಾಡಿ ಆ ಮೂಲಕ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ದೂರಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಜೊತೆಗೆ ಮಕ್ಕಳಿಗೆ ಈವರೆಗೆ ಸಿಗುತ್ತಿದ್ದ ಪೌಷ್ಟಿಕ ಆಹಾರ ಸಿಗದಂತಾಗುತ್ತದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಶಿಕ್ಷಣದ ಜೊತೆಗೆ ಅವರ ಪೌಷ್ಟಿಕ ಹೆಚ್ಚಳದ ಬಗ್ಗೆಯೂ ಕಾಳಜಿ ವಹಿಸಲಾಗುತ್ತದೆ. ಆದರೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇದು ಸಾಧ್ಯವಿಲ್ಲ. ಈ ಮೂಲಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ದುರ್ಬಲಗೊಳಿಸುವ ಮೂಲಕ ಮಕ್ಕಳ ಮತ್ತು ಮಹಿಳೆಯರ ಕಲ್ಯಾಣವನ್ನು ನಿರ್ಲಕ್ಷಿಸಲಾಗುತ್ತದೆ ಎಂದು ದೂರಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯು.ಕೆ.ಜಿ. ಪ್ರಾರಂಭಿಸುವ ಮೂಲಕ ಶಾಲಾ ಪೂರ್ವ ಶಿಕ್ಷಣ ನೀತಿ ಆರಂಭಿಸಲು ಒತ್ತಾಯಿಸಿದರು.

Advertisement

ಈ ಬೇಡಿಕೆಗಳಿಗಾಗಿ ಜ.10, 2022ದಿಂದ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಹೋರಾಟ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು. ಅಂಗನವಾಡಿ ನೌಕರರ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ನಡೆಯುವ ಸಹಿ ಸಂಗ್ರಹ ಚಳವಳಿಗೆ ಚಾಲನೆ ನೀಡಲಾಯಿತು.

ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್‌.ಪದ್ಮಾ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್‌.ಶರಣಬಸವ, ಜಿಲ್ಲಾಧ್ಯಕ್ಷೆ ವರಲಕ್ಷ್ಮೀ, ಕೆಪಿಆರ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ್‌, ಸಂಘದ ಜಿಲ್ಲಾ ಕಾರ್ಯದರ್ಶಿ ರಂಗಮ್ಮ ಅನ್ವಾರ್‌, ರಮಾದೇವಿ, ರಾಜೇಶ್ವರಿ ಸಿರವಾರ ಇದ್ದರು. ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲೂಕಗಳನ್ನು ಪ್ರತಿನಿಧಿಸಿ ಅಂಗನವಾಡಿ ನೌಕರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next