Advertisement

2500 ಸ್ವಸಹಾಯ ಗುಂಪುಗಳ ಸಬಲೀಕರಣಕ್ಕಾಗಿ ಮಹತ್ವದ ಒಪ್ಪಂದಕ್ಕೆ ಸಹಿ

01:43 PM Jul 29, 2022 | Team Udayavani |

ಬೆಂಗಳೂರು: ಸಂಜೀವಿನಿ – ಕೆ.ಎಸ್.ಆರ್.ಎಲ್.ಪಿ.ಎಸ್ ಮತ್ತು ಇ-ಕಾಮರ್ಸ್ ಸಂಸ್ಥೆ ಮೀಶೋ ನಡುವೆ ರಾಜ್ಯದ 2500 ಸ್ವಸಹಾಯ ಗುಂಪುಗಳ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸ್ತ್ರೀ ‘ಸಾಮರ್ಥ್ಯ’ ಕರ್ನಾಟಕದಿಂದ ಜಗತ್ತಿಗೆ ತಿಳಿಯಲಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದು ಈ ಯೋಜನೆಯನ್ನು ಎಂಡ್ –ಟು-ಎಂಡ್ ಮಾರ್ಗದಲ್ಲಿ ಕೈಗೊಳ್ಳಲಾಗುವುದು. ಗ್ರಾಮೀಣ ಮಹಿಳೆಯರ ಸಬಲೀಕರಣದ ಸರ್ಕಾರದ ಈ ಪ್ರಯತ್ನದಲ್ಲಿ ಕೆನರಾ ಬ್ಯಾಂಕ್ ಹಾಗೂ ಮೀಶೋ ಸಂಸ್ಥೆಗಳು ಕೈಜೋಡಿಸಿರುವುದು ಸ್ವಾಗತಾರ್ಹ ಎಂದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತ ಸರ್ಕಾರದ ಜೋವನೋಪಾಯ ಕಾರ್ಯಕ್ರಮಗಳ ನೆರವಿನೊಂದಿಗೆ ಹಾಗೂ ಎಲಿವೇಟ್ ಯೋಜನೆಯಡಿಯಲ್ಲಿಯೂ ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ಒದಗಿಸುತ್ತಿದೆ. ಈ ಕಾರ್ಯಕ್ರಮಗಳನ್ನು ವೃದ್ಧಿಸಿ ಸೂಕ್ಷ್ಮ ಮಟ್ಟದಲ್ಲಿ ನಿರ್ವಹಣೆ ಮಾಡುವ ಅಗತ್ಯವಿದೆ ಎಂದರು.

ಮಹಿಳಾ ಶಕ್ತಿಯಲ್ಲಿ ನಂಬಿಕೆ
ರಾಜ್ಯದ ಸ್ವಸಹಾಯ ಗುಂಪುಗಳನ್ನು ಕೆನರಾ ಬ್ಯಾಂಕ್ ಯೋಜನೆಗೆ ಆಯ್ದುಕೊಂಡಿರುವುದು ಶ್ಲಾಘನೀಯ ಎಂದ ಮುಖ್ಯಮಂತ್ರಿಗಳು, ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಆರ್ಥಿಕತೆ ಎಂದರೆ ಹಣವಲ್ಲ, ಬದಲಿಗೆ ಅದು ಜನರ ಆರ್ಥಿಕ ಚಟುವಟಿಕೆಗಳು. ಮಹಿಳೆಯರಲ್ಲಿ ಅಪಾರ ಶಕ್ತಿ ಇದ್ದು, ಸದಾ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಮಹಿಳಾ ಶಕ್ತಿಯಲ್ಲಿ ನನಗೆ ನಂಬಿಕೆ ಇದ್ದು, ಅದಕ್ಕಾಗಿಯೇ ಸಾಮರ್ಥ್ಯ ಎಂಬ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದೆ. ಸಮಾಜದ ಅರ್ಧದಷ್ಟಿರುವ ಮಹಿಳೆಯರು ಆರ್ಥಿಕ ಚಟುಚವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಇದಕ್ಕಾಗಿ ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮೀಶೋದಂತಹ ಆನ್ ಲೈನ್ ವಾಣಿಜ್ಯ ಸಂಸ್ಥೆಗಳ ಸಹಯೋಗದಲ್ಲಿ ಬ್ರಾಂಡಿಂಗ್, ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ ಜಾಗತಿಕ ಮರುಕಟ್ಟೆಗೆ ಅವರನ್ನು ಪರಿಚಯಿಸಬೇಕಿದೆ ಎಂದರು.

ಮಹಿಳೆಯರ ಬದುಕಿನಲ್ಲಿ ದೊಡ್ಡ ಬದಲಾವಣೆ
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರ ಸ್ವಯಂ ಉದ್ಯೋಗಕ್ಕಾಗಿ ನಿರ್ದಿಷ್ಟ ಯೋಜನೆಗಳನ್ನು ಗುರುತಿಸಿ, ಡಿಪಿಆರ್ ಸಿದ್ಧಪಡಿಸಿಕೊಳ್ಳಬೇಕು. ಇದರಿಂದ ಸಾವಿರಾರು ಮಹಿಳೆಯರ ಬದುಕಿನಲ್ಲಿ ಬಹು ದೊಡ್ಡ ಬದಲಾವಣೆಯನ್ನು ತರಲು ಸಾಧ್ಯವಿದೆ. ಸ್ವಾಭಿಮನಿ ಬದುಕನ್ನು ಬದುಕಲು ಸ್ವಾವಲಂಬನೆ ಅಗತ್ಯ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯವಿರುವ ನೆರವು ಹಾಗೂ ಸಹಕಾರವನ್ನು ನೀಡಲಿದೆ ಎಂದರು.

Advertisement

ಕಾರ್ಯಕ್ರಮದಲ್ಲಿ ಐಟಿಬಿಟಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್, ಸಚಿವರಾದ ಆರಗ ಜ್ಞಾನೇಂದ್ರ, ಬಿ.ಎ.ಬಸವರಾಜ, ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಮಂಜುಶ್ರೀ. ಎನ್, ಮೀಶೋ ಸಂಸ್ಥಾಪಕ ಹಾಗೂ ವಿದಿತ್ ಆತ್ರೇಯ, ಸಿಎಫ್ಒ ಧೀರೇಶ್ ಬನ್ಸಾಲ್, ಕೆನರಾ ಬ್ಯಾಂಕ್ ನ ದೇಬೇಂದರ್ ಸಾಹು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next