ಸಿರುಗುಪ್ಪ: ಇನ್ನೇನು ಮುಂಗಾರು ಶುರುವಾಗುತ್ತಿದ್ದು, ತಾಲೂಕಿನೆಲ್ಲೆಡೆ ರೈತಾಪಿ ವರ್ಗ ಕೃಷಿ ಚಟುವಟಿಕೆಗೆ ಸಿದ್ಧತೆ ಮಾಡುತ್ತಿದೆ. ಇದರ ಜತೆಗೆ ಕೆಲ ಖಾಸಗಿ ಬಿತ್ತನೆ ಬೀಜ ಮಾರಾಟ ಕಂಪನಿಗಳು ತಾಲೂಕಿನ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಆದರೆ ಅಂತಹ ಕಡೆ ಖರೀದಿಸಿದ ಬೀಜಗಳು ಕೆಲವೊಮ್ಮೆ ವಿಫಲಗೊಳ್ಳುತ್ತಿದ್ದು, ರೈತರು ಕೈ ಸುಟ್ಟುಕೊಳ್ಳುವ ಸಾಧ್ಯತೆ ಇದೆ. ಇಂತಹ ಕಡೆ ಬೀಜಗಳನ್ನು ಖರೀದಿಸದಂತೆ ಅನೇಕ ಬಾರಿ ಎಚ್ಚರಿಕೆ ನೀಡಿದೆಯಾದರೂ ಗಡಿಭಾಗದ ಸೀಮಾಂದ್ರ ಮತ್ತು ತೆಲಂಗಾಣದ ಕೆಲವು ಖಾಸಗಿ ಕಂಪನಿಗಳು ಗಡಿಭಾಗದ ಪ್ರದೇಶಗಳಲ್ಲಿ ಪ್ರಚಾರ ಮಾಡುತ್ತಿವೆ.
Advertisement
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಪ್ರದೇಶ, ಬೋರ್‌ವೆಲ್ ನೀರಿನ ಸೌಲಭ್ಯ ಹೊಂದಿದ ರೈತರು ಸುಮಾರು 22 ರಿಂದ 25ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯುತ್ತಾರೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹತ್ತಿಯನ್ನು ಬೆಳೆಯುವ ರೈತರು ತಾಲೂಕಿನಲ್ಲಿರುವುದರಿದಂದ ಹತ್ತಿ ಬೀಜ ಮಾರಾಟಗಾರರು, ರೈತರ ಹತ್ತಿರ ಬೀಜ ಮಾರಾಟ ಮಾಡಲು ಹಳ್ಳಿಗಳಿಗೆ ಬರುವುದು ಸಾಮಾನ್ಯವಾಗಿದೆ.
Related Articles
Advertisement
ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಕಂಪನಿಗಳ ಬಿತ್ತನೆ ಬೀಜ ಖರೀದಿಸಬಾರದು. ಒಂದು ವೇಳೆ ಖರೀದಿಸಿದರೆ ಕಡ್ಡಾಯವಾಗಿ ಬಿಲ್ ಪಡೆಯಬೇಕು. ಇಳುವರಿ ಕೈ ಸೇರುವವರೆಗೆ ಪ್ಯಾಕೆಟ್‌ಗಳನ್ನು ಕಾಯ್ದಿರಿಸಿಕೊಳ್ಳಬೇಕು. ಒಂದು ವೇಳೆ ನಕಲಿಯಾಗಿದ್ದರೆ ಅಂತಹ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಮಗೆ ದಾಖಲೆ ಬೇಕಾಗುತ್ತದೆ. ಆದ್ದರಿಂದ ರೈತರು ಅಧಿಕೃತ ಅಂಗಡಿಗಳಲ್ಲಿ ಬಿತ್ತನೆ ಬೀಜ ಖರೀದಿಸುವುದು ಸೂಕ್ತ.• ಬಿ.ಆರ್.ಪಾಲಾಕ್ಷಿಗೌಡ,
ತಾಲೂಕು ಸಹಾಯಕ ಕೃಷಿ ಅಧಿಕಾರಿ ಕೆಲ ಖಾಸಗಿ ಕಂಪನಿಗಳು ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಚಾರ ಮಾಡುತ್ತಿವೆ. ಕಡಿಮೆ ದರ, ಹೆಚ್ಚು ಇಳುವರಿ ಎಂದೆಲ್ಲಾ ಹೇಳಿ ರೈತರ ಮನವೊಲಿಸುತ್ತಿವೆ. ಅಂತಹ ಕಂಪನಿಗಳ ಮೇಲೆ ಕೃಷಿ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು.
• ವಾ.ಹುಲುಗಯ್ಯ,
ರೈತ ಮುಖಂಡರು.