ಹ್ಯೂಸ್ಟನ್ ( ಅಮೇರಿಕಾ): ಬಹುನಿರೀಕ್ಷಿತ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮೇರಿಕಾದ ಟೆಕ್ಸಾಸ್ ರಾಜ್ಯದ ಹ್ಯೂಸ್ಟನ್ ಪ್ರವಾಸದಲ್ಲಿರುವ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯ ಸಿಖ್ ಸಮುದಾಯದ ಸದಸ್ಯರು ರವಿವಾರ ಭೇಟಿಯಾದರು. ಮೋದಿ ಸರಕಾರದಲ್ಲಿ ತೆಗೆದುಕೊಂಡಿರುವ ಮಹತ್ವದ ನಿರ್ಧಾರಗಳ ಬಗ್ಗೆ ಸಿಖ್ ಸಮುದಾಯ ಮೆಚ್ಚುಗೆ ವ್ಯಕ್ತಪಡಿಸಿತು.
ಈ ವೇಳೆ 1984ರ ಸಿಖ್ ನರಮೇಧದ ಬಗ್ಗೆ ಉಲ್ಲೇಖಿಸಿದ ಸಮುದಾಯದ ಸದಸ್ಯರು, ಹೊಸದಿಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದಿರಾ ಗಾಂಧಿ ಬದಲು ಗುರು ನಾನಕ್ ದೇವ್ ಅವರ ಹೆಸರಿಡಬೇಕೆಂದು ಒತ್ತಾಯಿಸಿದೆ.
ಸಿಖ್ ಸಮುದಾಯದ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನಿರ್ಧಾರಗಳಿಗೆ ವಿಶೇಷವಾಗಿ ಕರ್ತಾಪುರ ಕಾರಿಡರ್ ಯೋಜನೆಗೆ ಸಮುದಾಯ ಕೃತಜ್ಞತೆ ಸಲ್ಲಿಸಿತು.
ಹೌಡಿ ಮೋದಿ ಕಾರ್ಯಕ್ರಮಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಆಗಮಿಸುತ್ತಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರ ಪ್ರಾಮುಖ್ಯತೆಯನ್ನು ಸಾರುತ್ತದೆ ಎಂದು ಕ್ಯಾಲಿಫೋರ್ನಿಯಾದ ಎರ್ವಿನ್ ನ ಪ್ರಭಾರಿ ಆಯುಕ್ತರಾದ ಅವಿಂದರ್ ಚಾವ್ಲಾ ಅಭಿಪ್ರಾಯ ಪಟ್ಟಿದ್ದಾರೆ.