ಸಿಕ್ಕಿಂ: ಸಿಕ್ಕಿಂನಲ್ಲಿ ಮಿನರಲ್ ನೀರಿನ ಬಾಟಲ್ ಮಾರಾಟವನ್ನು ಜ.1ರಿಂದ ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಘೋಷಿಸಿದ್ದಾರೆ.
ಗಾಂಧಿ ಜಯಂತಿ ಪ್ರಯುಕ್ತ ನಡೆಸಲಾದ ಸ್ವತ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಘೋಷಣೆ ಮಾಡಿದ್ದಾರೆ. ನಿಷೇಧ ಜಾರಿಗೆ ಬಂದ ನಂತರ ಮಾರುಕಟ್ಟೆಯಲ್ಲಿ ಸಂಗ್ರಹವಿರುವ ನೀರಿನ ಬಾಟಲ್‌ಗಳನ್ನು ಖಾಲಿ ಮಾಡಲು 3 ತಿಂಗಳ ಕಾಲಾವಕಾಶ ಕೊಡಲಾಗುವುದು ಎಂದರು.
ರಾಜ್ಯದಲ್ಲಿ ಶುದ್ಧ ನೀರು ಕೊಡುವ ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳಿವೆ. ಜನರು ಮಿನರಲ್ ನೀರಿನ ಬಾಟಲ್ ಬದಲು ನೈಸರ್ಗಿಕ ಸಂಪನ್ಮೂಲಗಳನ್ನು ಬಳಕೆ ಮಾಡಬೇಕು ಎಂದರು.
ಇದನ್ನೂ ಓದಿ:ಮೂಡಿಗೆರೆ ಶೌಚಾಲಯದಲ್ಲಿ ಅಡಗಿತ್ತು ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ
ಇತರ ರಾಜ್ಯಗಳಿಂದ ಬರುವ ಪ್ರವಾಸಿಗರು ನೀರಿನ ಬಾಟಲ್‌ಗಳನ್ನು ಬಳಕೆ ಮಾಡಿ ತ್ಯಾಜ್ಯ ಸೃಷ್ಟಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು ಸಿಎಂ.