Advertisement

ಕೋವಿಡ್ 19 ಅಟ್ಟಹಾಸ: ಸಿಕ್ಕಿಂನಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್

11:51 PM Jul 20, 2020 | Nagendra Trasi |

ನವದೆಹಲಿ: ಕೋವಿಡ್ 19 ಪ್ರಕರಣಗಳು ದಿನೇ, ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಜುಲೈ 21ರಿಂದ ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ಸೋಮವಾರ ವರದಿ ತಿಳಿಸಿದೆ.

Advertisement

ಸಿಕ್ಕಿಂನಲ್ಲಿ ಜುಲೈ21ರಿಂದ 27ರವರೆಗೂ ಲಾಕ್ ಡೌನ್ ಮುಂದುವರಿಯಲಿದೆ. ಅಷ್ಟೇ ಅಲ್ಲ ಲಾಕ್ ಡೌನ್ ಸಂದರ್ಭದಲ್ಲಿ ಬೆಳಗ್ಗೆ 6ರಿಂದ ಸಂಜೆವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಜುಲೈ 27ರವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಕಚೇರಿಗಳು, ವಾಣಿಜ್ಯ, ಸೇರಿದಂತೆ ಮಾರ್ಕೆಟ್, ಫ್ಯಾಕ್ಟರಿಗಳು ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಲ್ಲಾ ರೀತಿಯ ವಾಹನ ಓಡಾಟ, ಜನರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next